ಮಳವಳ್ಳಿ: ಜನಸಾಮಾನ್ಯರಿಗೂ ಸಮರ್ಪಕ ನ್ಯಾಯ ಸಿಗುವಂತಾಗಲು ದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆಯಾಗಬೇಕು. ಆ ನಿಟ್ಟಿನಲ್ಲಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ನಾವು ದ್ರಾವಿಡ ಕನ್ನಡಿಗರು ಚಳವಳಿ ಸಂಚಾಲಕ ಅಭಿಗೌಡ ತಿಳಿಸಿದರು.

‘ನಾವು ದ್ರಾವಿಡ ಕನ್ನಡಿಗರು’ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ‘ಸೌತ್ ಇಂಡಿಯಾಗೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು’ ವಿಷಯ ಕುರಿತ ಸಾರ್ವಜನಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

‘ಸುಪ್ರೀಂ ಕೋರ್ಟ್ ಸುಮಾರು 2500 ಕಿ.ಲೋ ಮೀಟರ್ ದೂರದ ದೆಹಲಿಯಲ್ಲಿರುವುದರಿಂದ ಜನಸಾಮಾನ್ಯರು ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ ಎನ್ನುವ ಪರಿಸ್ಥಿತಿ ಇದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಸ್ಥಾಪನೆಗೆ ಸಂವಿಧಾನ ಬದ್ಧವಾಗಿಯೂ ಅವಕಾಶವಿದೆ. ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಇರುವ ಪ್ರಕರಣಗಳನ್ನು ಹಲವು ವರ್ಷಗಳಾದರೂ ಬಗೆಹರಿಸಲು ಸಾಧ್ಯವಾಗುವುದಿಲ್ಲ, ಇಂಥ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿ ಮತ್ತೊಂದು ಪೀಠದ ಆರಂಭಿಸುವ ಮೂಲಕ ಕಡಿಮೆ ಅವಧಿಯಲ್ಲಿ ಪ್ರಕರಣಗಳನ್ನು ಇರ್ತರ್ಥಪಡಿಸಿಕೊಳ್ಳಬಹುದಾಗಿದೆ’ ಎಂದರು.

‘ಪೀಠ ಸ್ಥಾಪನೆಯಾದರೆ ಇಲ್ಲಿನ ನ್ಯಾಯಾಧೀಶರು ಹಾಗೂ ವಕೀಲರಿಗೆ ಅನುಕೂಲವಾಗುವುದರ ಜೊತೆಗೆ ದೇಶಿ ಭಾಷೆಯಲ್ಲಿಯೇ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಬಹುದಾಗಿದೆ. ವಿವಿಧ ಭಾಗಗಳಲ್ಲಿ ಸಭೆ ನಡೆಸಿ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು ರಾಜ್ಯದ ಸಂಸದರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದು ಹೇಳಿದರು.

ಸಭೆಯಲಿದ್ದ ಹಲವು ಮುಖಂಡರು ಸುಪ್ರೀಂ ಕೋರ್ಟ್ ಸ್ಥಾಪನೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಪ್ರೊ.ಮುನಿರಾಜು, ಪ್ರಗತಿಪರ ಚಿಂತಕ ಎಂ.ವಿ. ಕೃಷ್ಣ, ನವೀನ್, ಮನುಗೌಡ, ಬಸವರಾಜು ನಾಯಕ್, ದರ್ಶನ್, ಶಿವಕೀರ್ತನ್, ಸೋಮಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.