ಮಂಡ್ಯ: ‘ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಸಹಕಾರ ಸಂಘಗಳಿಗೆ ನೀಡಲಾಗುವ ಸಾಲದ ಮೊತ್ತವನ್ನು ನಬಾರ್ಡ್ ಬ್ಯಾಂಕ್ ಕಡಿತಗೊಳಿಸಿರುವುದು ರೈತ ವಿರೋಧಿ ನಿಲುವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೌನ ವಹಿಸಿರುವುದು ಸರಿಯಲ್ಲ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಆರ್ಬಿಐ ಮೂಲಕ ನಬಾರ್ಡ್ಗೆ ಹೆಚ್ಚು ಹಣ ನೀಡಿ, ದೇಶದ ರೈತರಿಗೆ ನೆರವಾಗಬೇಕಿದ್ದ ಕೇಂದ್ರ ಸರ್ಕಾರವು ಸಾಲದ ಮೊತ್ತವನ್ನು ಶೇ 50ರಷ್ಟು ಕಡಿತಗೊಳಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್ ವಿರುದ್ಧ ಹೋರಾಟ ನಡೆಸಿದ್ದ ದೇವೇಗೌಡರು ಪ್ರಧಾನಿ ಮೋದಿಯವರ ರೈತ ವಿರೋಧಿ ನಿಲುವಿನ ಬಗ್ಗೆ ಏಕೆ ಮೌನ ವಹಿಸಿದ್ದಾರೆ? ಈ ಬಗ್ಗೆ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಲ್ಹಾದ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಮೌನವಾಗಿರುವ ಗುಟ್ಟೇನು’ ಎಂದರು.

‘ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಬೆಳೆ ಸಾಲ ಬಿಡುಗಡೆಯಾಗಿತ್ತು. ಆದರೆ ಈ ಬಾರಿ ₹2,340 ಕೋಟಿ ಬಿಡುಗಡೆಗೊಳಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ದ್ರೋಹ ಬಗೆದಿದೆ’ ಎಂದು ದೂರಿದರು.

‘ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ಗೆ ನೆರವಾಗಲಿದ್ದು, ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಜಯ ಖಾತ್ರಿಯಾಗಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇದೆ’ ಎಂದರು.

ಸಚಿವ ಸ್ಥಾನ ಸಿಗದೆ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೋವಿನಲ್ಲಿದ್ದಾರೆ. ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅವರಿಗೆ ಜಿಲ್ಲೆಯ ಶಾಸಕರು ಮಾಜಿ ಶಾಸಕರ ಬೆಂಬಲವಿದೆ. ಸ್ಥಾನ ಒಲಿಯುವ ವಿಶ್ವಾಸವೂ ಇದೆ
ಎನ್.ಚಲುವರಾಯಸ್ವಾಮಿ ಕೃಷಿ ಸಚಿವ

ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿಪೂಜೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದ 60 ಎಕರೆ ಜಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

‘ಸಮ್ಮೇಳನಕ್ಕೆ ಒಂದು ತಿಂಗಳಿದ್ದು ಇಂದಿನಿಂದ ವೇದಿಕೆ ನಿರ್ಮಾಣದ ಚಟುವಟಿಕೆಗಳು ಪ್ರಾರಂಭವಾಗಲಿವೆ. ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿದ್ದಕ್ಕೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ’ ಎಂದರು. ‘ಸಮ್ಮೇಳನಕ್ಕೆ 3 ಲಕ್ಷದಿಂದ 4 ಲಕ್ಷ ಜನ ಬರುವ ನಿರೀಕ್ಷೆಯಿದೆ. ಊಟ ಪಾರ್ಕಿಂಗ್ ವ್ಯವಸ್ಥೆ ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.