ಮೈಸೂರು: ‘ಸಿದ್ದರಾಮಯ್ಯ ತಮ್ಮ ಆಡಳಿತದ ಅವಧಿಯಲ್ಲಿ ನಾಡಿನ ಎಲ್ಲ ಸಮಾಜಗಳ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದರು. ಐದು ವರ್ಷಗಳವರೆಗೆ ಉತ್ತಮ ಆಡಳಿತ ನೀಡಿದರು. ನಮ್ಮದೇ ತಪ್ಪಿನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಾಗಲಿಲ್ಲ. ನಮ್ಮ ಯೋಜನೆಗಳ ಬಗ್ಗೆ ಜನರಿಗೆ ಸರಿಯಾಗಿ ತಿಳಿಸಿದ್ದರೆ ಖಂಡಿತ ಅಧಿಕಾರಕ್ಕೆ ಬರುತ್ತಿದ್ದೆವು’ ಎಂದು ಮುಖಂಡ ಬೆಳಗಾವಿಯ ಮುಖಂಡ ಅಶೋಕ ಪಟ್ಟಣ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬುಧವಾರ ಆಯೋಜಿಸಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ಎಲ್ಲ ವರ್ಗದ ಮುಖಂಡರ ಜೊತೆ ಗುರುತಿಸಿಕೊಂಡಿರುವ ನಾನು ವೀರಶೈವ ಲಿಂಗಾಯತ ಸಮಾಜದವನು ಎಂದು ಅನೇಕರಿಗೆ ತಿಳಿದಿರಲಿಲ್ಲ. ಆಪರೇಷನ್ ಕಮಲದ ಸಂದರ್ಭದಲ್ಲಿ ನನಗೂ ಆಫರ್ ಬಂದಿತ್ತು. ಬಿಜೆಪಿ ಸೇರುವಂತೆ ಇತರ ಜಾತಿಯ ನಾಯಕರಿಗೆ ₹15 ಕೋಟಿಯಿಂದ ₹ 20 ಕೋಟಿ ಮತ್ತು ಮಂತ್ರಿಗಿರಿ ಆಮಿಷ ಒಡ್ಡಲಾಯಿತು. ಆದರೆ, ನಾನು ಲಿಂಗಾಯತ ಎಂದು ಗೊತ್ತಾಗಿದ್ದರಿಂದ ₹ 30 ಕೋಟಿ ಮತ್ತು ಪ್ರಮುಖ ಸಚಿವ ಸ್ಥಾನದ ಆಫರ್ ಬಂದಿತ್ತು. ಆಮಿಷಕ್ಕೆ ಒಳಗಾಗದೆ ಕಾಂಗ್ರೆಸ್‍ನಲ್ಲೆ ಉಳಿದೆ’ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಡಾ.ಡಿ.ತಮ್ಮಯ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮುಖಂಡರಾದ ಡಾ.ಎಚ್.ಸಿ ಮಹದೇವಪ್ಪ, ವಾಸು, ಎಂ.ಕೆ.ಸೋಮಶೇಖರ್, ಪುಷ್ಪಲತಾ ಚಿಕ್ಕಣ್ಣ, ಹರೀಶ್ ಗೌಡ, ನಾರಾಯಣ, ಆರ್.ಧರ್ಮಸೇನಾ, ಅಯೂಬ್‌ಖಾನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.