ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಮೈಸೂರು ಸಂಸದ ಪ್ರತಾಪ್ಸಿಂಹ ವಾಗ್ದಾಳಿ ಮುಂದುವರಿಸಿದ್ದಾರೆ.

ಮೈಸೂರಿನಲ್ಲಿ ಕೆಟ್ಟ ಪರಿಸ್ಥಿತಿ ಇದೆ ಎಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ವ್ಯವಸ್ಥಿತ ಯೋಜನೆ ರೂಪಿಸದ ಕಾರಣ ಸಾಕಷ್ಟು ಸಾವು ನೋವು ಆದವು. ಮೇ ತಿಂಗಳೊಂದರಲ್ಲೇ ಒಂದು ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಸಿಂಧೂರಿ ವಿರುದ್ದ ಪ್ರತಾಪ್ಸಿಂಹ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇಂದಿಗೂ ಲಾಕ್ಡೌನ್ ಮುಂದುವರಿದಿದೆ. ಇದರಿಂದ ಉದ್ಯಮದ ಮೇಲೆ ಸಾಕಷ್ಟು ಹೊಡೆತ ಬಿದ್ದಿದೆ. ಮುಂದಿನ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಶೇ 5ಕ್ಕೆ ತರಲು ಶ್ರಮ ವಹಿಸಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.

ಅಲ್ಲದೆ ನೂತನ ಡಿಸಿ ಡಾ.ಬಗಾದಿ ಗೌತಮ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ಸಿಂಹ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.