ಮೈಸೂರು: ‘ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳು ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಕಠಿಣವಾಗಿವೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಬೆಳೆಸಿದ ಮರ ಕಡಿಯಲೂ ಸಾಧ್ಯವಾಗದ ಪರಿಸ್ಥಿತಿ ಇದೆ. ಇದರಿಂದ ರೈತರಿಗೆ ತೊಂದರೆ ಉಂಟಾಗುತ್ತಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬೇಸರ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರವು ಅರಣ್ಯ ಕೃಷಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಶ್ರೀಗಂಧ ಸೇರಿದಂತೆ ಎಲ್ಲಾ ರೀತಿಯ ಮರಗಳನ್ನು ಕಡಿದು ಸಾಗಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಿರುವ ಕಾಯ್ದೆ ಸಡಿಲಗೊಳಿಸುವ ಪ್ರಯತ್ನವನ್ನು ಪ್ರಧಾನಿ ಮೋದಿ ನಡೆಸುತ್ತಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯದಲ್ಲೂ ಕಾನೂನು ಸಡಿಲಗೊಳಿಸಬೇಕು. ಮರ ಕಡಿಯಲು ರೈತರಿಗೆ ಅವಕಾಶವಿಲ್ಲವೆಂದರೆ ಬೆಳೆಯಲು ಮನಸ್ಸು ಮಾಡುತ್ತಾರೆಯೇ? ಈ ಸಂಬಂಧ ಅರಣ್ಯ ಸಚಿವ ಉಮೇಶ್ ಕತ್ತಿ ಜೊತೆ ಚರ್ಚಿಸಿದ್ದೇನೆ’ ಎಂದರು.

ಇದನ್ನೂ ಓದಿ... IND vs ENG | ಇದು ಆತಂಕಪಡುವ ಸಮಯವಲ್ಲ, ಆಟ ಇನ್ನೂ ಬಾಕಿ ಇದೆ: ಜೋ ರೂಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.