ಮೈಸೂರು: ‘ರಾಜ್ಯದಲ್ಲಿ ಇದೀಗ 952 ಜನೌಷಧಿ ಕೇಂದ್ರಗಳಿವೆ. ಮುಂದಿನ 6 ತಿಂಗಳಲ್ಲಿ ಹೊಸದಾಗಿ 500 ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಇಲ್ಲಿ ತಿಳಿಸಿದರು.

‘ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಆರೋಗ್ಯ ಕೇಂದ್ರಗಳಲ್ಲೂ ಜನೌಷಧಿ ಕೇಂದ್ರ ಆರಂಭಿಸುವ ಆಲೋಚನೆಯಿದೆ. ಔಷಧಿ ಬಗ್ಗೆ ಅಪನಂಬಿಕೆ ಬೇಡ. ಗುಣಮಟ್ಟದ ಔಷಧಿಗಳು ಕಡಿಮೆ ದರಕ್ಕೆ ಸಿಗಲಿವೆ’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ದೇಶದಲ್ಲಿ ಇದೀಗ 3ನೇ ಸ್ಥಾನದಲ್ಲಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನೌಷಧಿ ಕೇಂದ್ರ ಆರಂಭಿಸಿ, ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಗೆ ಔಷಧಿ ಪೂರೈಸುವ ಮೂಲಕ ಮೊದಲ ಸ್ಥಾನಕ್ಕೆ ಬರುವ ಗುರಿಯನ್ನೊಂದಿದ್ದೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.