ಮೈಸೂರು: ‘ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ಜೆಡಿಎಸ್ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು.

ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಸೂರಜ್ ಅವರನ್ನು ಬಂಧಿಸಿರುವ ವಿಷಯವೂ ನಿಮ್ಮಿಂದಲೇ (ಮಾಧ್ಯಮದಿಂದ) ತಿಳಿಯಿತು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ (ಪಕ್ಷದ) ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ’ ಎಂದರು.

‘ನಾವು ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ, ಯಾರೇ ತಪ್ಪು ಮಾಡಿದರೂ ತಪ್ಪೇ. ಜಾತ್ಯತೀತ ಜನತದಾಳ ಪಕ್ಷವು ತಪ್ಪು ಮಾಡಿದವರ ಪರವಾಗಿ ಎಂದಿಗೂ ನಿಲ್ಲುವುದಿಲ್ಲ’ ಎಂದು ಹೇಳಿದರು.

‘ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರವೇಕೆ’ ಎಂದು ಕೇಳಿದ ಅವರು, ‘ರಾಜ್ಯದಲ್ಲಿ ಯಾರೋ ಒಬ್ಬ ತಪ್ಪು ಮಾಡಿದರೆ ಅದಕ್ಕೆ ಆರೂವರೆ ಕೋಟಿ ಜನ ಕಾರಣವೇ? ಅಲ್ಲ ತಾನೇ? ಇದೂ ಹಾಗೆಯೇ’ ಎಂದು ಪ್ರತಿಕ್ರಿಯಿಸಿದರು.
.ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಡಾ.ಸೂರಜ್ ರೇವಣ್ಣ ಬಂಧನ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣದ ತನಿಖೆ CID ಹೆಗಲಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.