ಮೈಸೂರು: ‘ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ಮತ್ತಿತರ ಕೆಲಸದ ಸಂದರ್ಭಗಳಲ್ಲಿ ಅವಘಡಗಳನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸಂಯುಕ್ತ ಅಕ್ಷರದಾಸೋಹ ಕಾರ್ಮಿಕರ ಸಂಘದ ಕಾರ್ಯದರ್ಶಿ ಸಂಧ್ಯಾ ಪಿ.ಎಸ್. ಒತ್ತಾಯಿಸಿದ್ದಾರೆ.

‘ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಪ್ರೌಢಶಾಲೆಯೊಂದರಲ್ಲಿ ಬಿಸಿಯೂಟ ಕಾರ್ಯಕರ್ತೆ ಗೌರಮ್ಮ ಎನ್ನುವವರು ಅಡುಗೆ ಮಾಡುವ ವೇಳೆ ಬಿಸಿಬೇಳೆ ಬಾತ್ ಚೆಲ್ಲಿ ತೀವ್ರವಾಗಿ ಸುಟ್ಟ ಗಾಯಗಳಾಗಿ ಮೃತಪಟ್ಟಿದ್ದಾರೆ. ಇತರ ಅಡುಗೆ ಸಹಾಯಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ರೀತಿ ಲಕ್ಷಾಂತರ ಬಿಸಿ ಊಟ ಕಾರ್ಯಕರ್ತೆಯರು ಸೂಕ್ತ ಭದ್ರತೆ, ರಕ್ಷಣೆ ಇಲ್ಲದೆ ಯಾವುದೇ ಕಾರ್ಮಿಕ ಕಾಯ್ದೆಗೂ ಒಳಪಡದೇ ಕೆಲಸ ಮಾಡುತ್ತಿದ್ದಾರೆ. ಅತ್ಯಲ್ಪ ದುಡಿಮೆಯ ಹಣವನ್ನು ಗೌರವಧನದ ಹೆಸರಿನಲ್ಲಿ ಪಡೆಯುತ್ತಿದ್ದಾರೆ. ರಾಜ್ಯ ಕನಿಷ್ಠ ವೇತನ ಕಾಯ್ದೆಯ ಅನ್ವಯ ಬಿಸಿಯೂಟ ಕಾರ್ಯಕರ್ತೆಯರನ್ನು ಶೆಡ್ಯೂಲ್‌ಗೆ ಒಳಪಡಿಸಬೇಕು’ ಎಂದು ಕೋರಿದ್ದಾರೆ.

‘ಮೃತರ ಕುಟುಂಬಕ್ಕೆ ಕನಿಷ್ಠ ₹ 10 ಲಕ್ಷ ಪರಿಹಾರ ನೀಡಬೇಕು. ಗಾಯಗಳಾಗಿರುವ ಸಹಾಯಕಿಯರಿಗೆ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸಬೇಕು. ಗಾಯದ ತೀವ್ರತೆ ಪರಿಗಣಿಸಿ ಕನಿಷ್ಠ ₹ 1 ಲಕ್ಷ ಚೇತರಿಕೆ ಧನಸಹಾಯ ನೀಡಬೇಕು. ಈ ನೌಕರರ ಸುರಕ್ಷತೆಗೆ ಆದ್ಯತೆ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.