ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ತಾಲ್ಲೂಕಿನ ಮಳಲಿ ಗ್ರಾಮದ ಸುಬ್ರಹ್ಮಣ್ಯ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆಯು ಮತ್ತೊಂದು ಹುಲಿಯನ್ನು ಸೋಮವಾರ ಸೆರೆ ಹಿಡಿದಿದೆ.

ಮುಂಜಾನೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ಹುಲಿ ಕಾಣಿಸಿಕೊಂಡಿದ್ದಾಗಿ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದರು. ಸಾಕಾನೆಗಳಾದ ‘ಮಹೇಂದ್ರ’ ಹಾಗೂ ‘ಭೀಮ’ ನೆರವಿನಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಹೆಣ್ಣು ಹುಲಿಯನ್ನು ಸೆರೆಹಿಡಿಯಲಾಯಿತು. ಪಶು ವೈದ್ಯ ಡಾ.ರಮೇಶ್ ಅವರು ಅರಿವಳಿಕೆ ನೀಡಿದ್ದರು.

ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ವಲಯ ಅರಣ್ಯಾಧಿಕಾರಿಗಳಾದ ಹರ್ಷಿತ್ ಕುಮಾರ್, ಭರತ್ ತಳವಾರ್, ಮಧು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಎರಡು ದಿನದ ಹಿಂದಷ್ಟೇ ಕಬಿನಿ ಹಿನ್ನೀರಿನ ಸಮೀಪದ ಡಿಸ್ಕವರಿ ವಿಲೇಜ್ ರೆಸಾರ್ಟ್ ಬಳಿ 8 ವರ್ಷದ ಗಂಡು ಹುಲಿಯೊಂದನ್ನು ಸೆರೆ ಹಿಡಿಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.