ಮೈಸೂರು: ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿರುವ ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಇಲ್ಲಿ ಎರಡು ದಿನ ನಡೆದ ಪಕ್ಷದ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳ ಕಾರ್ಯಾಗಾರದಿಂದ ದೂರ ಉಳಿದರು.

ಈ ಬಗ್ಗೆ ಇಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ‘ಅವರಿಗೆ ಸ್ಥಳೀಯವಾಗಿ ಒಂದಿಷ್ಟು ಸಮಸ್ಯೆಗಳಿವೆ. ಆ ಕಾರಣದಿಂದಾಗಿ ಪಕ್ಷದ ಕಾರ್ಯಾಗಾರಕ್ಕೆ ಬಂದಿಲ್ಲ. ನಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿದ್ದಾರೆ. ಇರುವುದು–ಬಿಡುವುದು ಅವರ ವೈಯಕ್ತಿಕ ನಿರ್ಧಾರ’ ಎಂದು ಹೇಳಿದರು.

‘ಅವರನ್ನು ಸೋಲಿಸುವುದಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಹುನ್ನಾರ ನಡೆಸಿವೆ. ಅದೆಲ್ಲದರ ಲೆಕ್ಕಚಾರದಲ್ಲಿ ಶಿವಲಿಂಗೇಗೌಡ ತೊಡಗಿದ್ದಾರೆ’ ಎಂದರು.

‘ಈಗಾಗಲೇ ಮೈಸೂರು ಭಾಗದ ಬಹುತೇಕ ಕ್ಷೇತ್ರಗಳ ಪಟ್ಟಿ ಸಿದ್ಧವಿದೆ. ಬಿಡುಗಡೆವರೆಗೆ ಕುತೂಹಲವಿರಲಿ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.