ಮೈಸೂರು: ‘ನಂಜನಗೂಡು ನಗರಸಭೆಯಲ್ಲಿ ಕಾಂಗ್ರೆಸ್ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ’ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಆರೋಪಿಸಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತವಿದ್ದರೂ ಅಧಿಕಾರ ಕೈ ತಪ್ಪಿದೆ. ಮತದಾನಕ್ಕೆ ಗೈರು ಹಾಜರಾದ ನಾಲ್ವರು ಬಿಜೆಪಿ ಸದಸ್ಯರು ಕನಕಪುರದ ಬಳಿ ರೆಸಾರ್ಟ್‌ನಲ್ಲಿ ಇದ್ದರೆಂದು ತಿಳಿದುಬಂದಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದರು.

‘ಆ ನಾಲ್ವರು ಸದಸ್ಯರು ನಮ್ಮ ಸಂಪರ್ಕಕ್ಕೆ ಸಿಗಲಿಲ್ಲ. ಜೆಡಿಎಸ್‌ನ ರೆಹಾನಬಾನು ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲು ಒಪ್ಪಿದ್ದೆವು. ಆದರೂ ಜೆಡಿಎಸ್‌ನ ಮೂವರು ಸದಸ್ಯರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಜತೆ ಕೈ ಜೋಡಿಸಿದರು. ಅವರೆಲ್ಲರೂ ಹಣದ ಆಮಿಷಕ್ಕೆ ಬಲಿಯಾಗಿದ್ದಾರೆ. ಜೆಡಿಎಸ್ ಸದಸ್ಯರ ನಿಲುವು ಆಘಾತವನ್ನುಂಟು ಮಾಡಿದೆ. ಅಧಿಕಾರ ಹಿಡಿಯಬೇಕೆಂಬ ಹಟದಲ್ಲಿ, ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಸಂಗ್ರಹಿಸಿದ ಹಣ ಬಳಸಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷರು, ಸಂಸದರು ಹಾಗೂ ಶಾಸಕರ ಕೈವಾಡವಿದೆ’ ಎಂದು ಆರೋಪಿಸಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿದರು. ಪಕ್ಷದ ಮುಖಂಡರಾದ ಸಿ. ಚಿಕ್ಕರಂಗನಾಯಕ, ಮಹದೇವಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.