ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ಮುಡಾ ಅವ್ಯವಹಾರ: ಬಿಜೆಪಿ ಪ್ರತಿಭಟನೆ

Published 4 ಜುಲೈ 2024, 6:14 IST
Last Updated 4 ಜುಲೈ 2024, 6:14 IST
ಅಕ್ಷರ ಗಾತ್ರ

ಮೈಸೂರು: 'ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಎಸಗಿರುವವರನ್ನು ಬಂಧಿಸಬೇಕು' ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಕಚೇರಿಯಿಂದ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ರಾಮಸ್ವಾಮಿ ವೃತ್ತದಲ್ಲಿಯೇ ತಡೆದರು. ಬಳಿಕ ಅಲ್ಲಿಯೇ ಪ್ರತಿಭಟನೆ ಮುಂದುವರಿಯಿತು.

ಬಡವರ ಪರವಾಗಿ ಇರುತ್ತೇವೆ ಎಂದು ಹೇಳಿಕೊಂಡಿರುವ ಕಾಂಗ್ರೆಸ್ ಸರ್ಕಾರ ಬಡವರಿಗೆ ಸೇರಬೇಕಾದ ನಿವೇಶನಗಳನ್ನು ಬಲಾಢ್ಯರಿಗೆ ಹಂಚಿದೆ. 4 ಸಾವಿರ ಕೋಟಿಗೂ ಅಧಿಕ ಮೌಲ್ಯದ ಹಗರಣ ಇದಾಗಿದ್ದು, ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಿ ಜೈಲಿಗೆ ಕಳುಹಿಸಬೇಕು. ನಗರಾಭಿವೃದ್ಧಿ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದು ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT