ಮೈಸೂರು: ‘ರಾಜ್ಯವೂ ಸೇರಿದಂತೆ ದೇಶದಾದ್ಯಂತ ನರೇಂದ್ರ ಮೋದಿ ಅಲೆ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ’ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕಡಿಮೆ ಅವಧಿಯಲ್ಲೇ ಜನರ ವಿಶ್ವಾಸ ಕಳೆದುಕೊಂಡಿದೆ. ಯಾವ ವೇಗದಲ್ಲಿ ಅಧಿಕಾರಕ್ಕೆ ಬಂದಿತೋ ಅದೇ ವೇಗದಲ್ಲಿ ಪಾತಾಳಕ್ಕೆ ಬಿದ್ದಿದೆ. ಕಾಂಗ್ರೆಸ್ ಸರ್ಕಾರ ಶೇ 40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪಿಸಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ಖಜಾನೆ ಖಾಲಿ ಮಾಡಿದೆ. ಹೀಗಾಗಿ, ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಾಗಿ ದೆಹಲಿಗೆ ಹೋಗಿ ಪ್ರತಿಭಟನೆ ನಡೆಸಿ ಬಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಕೈಹಿಡಿಯುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.