ಕೆ.ಆರ್. ನಗರ: ರಾಜ್ಯದಲ್ಲಿ ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಸಂದಿರುವ ಗೆಲುವು ಗ್ಯಾರಂಟಿ ಕಾರ್ಯಕ್ರಮಗಳಿಗೆ ದೊರೆತ ಜಯವಾಗಿದೆ’ ಎಂದು ಅರಣ್ಯ, ಜೀವಿವಿಜ್ಞಾನ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಜಿಲ್ಲೆಯ ಕೆ.ಆರ್. ನಗರದಲ್ಲಿ ಸೋಮವಾರ ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆಯೇ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ. ಇದು ಜನರ ಮೆಚ್ಚುಗೆಗೆ ಕಾರಣವಾಗಿದೆ. ಇದನ್ನು ಸಹಿಸಲಾರದ ಪ್ರತಿಪಕ್ಷಗಳು ಇಲ್ಲಸಲ್ಲದ ಅಪಪ್ರಚಾರ ಮಾಡಿ, ಸುಳ್ಳು ಆರೋಪ ಹೊರಿಸಿ, ಅಬ್ಬರದ ಪ್ರಚಾರ ನಡೆಸಿದವು. ಆದರೆ, ಮತದಾರರು ಜೆಡಿಎಸ್–ಬಿಜೆಪಿಯ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ’ ಎಂದು ಹೇಳಿದರು.

‘ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳನ್ನು ಅಭದ್ರಗೊಳಿಸುವ ಸಂಚನ್ನು ಬಿಜೆಪಿ ಮಾಡುತ್ತಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು, ನಮ್ಮ ಪಕ್ಷದ ನಾಯಕರ ಮೇಲೆ ಸುಳ್ಳು ಆರೋಪ ಮಾಡುತ್ತಾ ರಾಜ್ಯದ ಜನತೆಯ ದಾರಿ ತಪ್ಪಿಸಲು ವಿರೋಧಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಜನರು ಚುನಾವಣಾ ಫಲಿತಾಂಶದ ಮೂಲಕ ಉತ್ತರ ನೀಡಿದ್ದಾರೆ’ ಎಂದರು.

ಶಾಸಕ ಡಿ.ರವಿಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.