ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರುಚಿಕರ ಮಾವಿಗೆ ವಿಷಕಾರಿ ಕಾರ್ಬೈಡ್‌! ಹಣ್ಣು ಮಾಗಿಸಲು ವರ್ತಕರ ತಂತ್ರ

Published : 1 ಮೇ 2024, 5:19 IST
Last Updated : 1 ಮೇ 2024, 5:19 IST
ಫಾಲೋ ಮಾಡಿ
Comments
ಏನಿದು ಕಾರ್ಬೈಡ್‌?
ಕ್ಯಾಲ್ಸಿಯಂ ಕಾರ್ಬೈಡ್‌ (CaC2) ಮಾರುಕಟ್ಟೆಯ ವರ್ತಕರು ರೈತರಿಗೆ ಕಾರ್ಬೈಡ್‌ ಎಂದೇ ಪರಿಚಿತ. ಹಣ್ಣಿನ ವ್ಯಾಪಾರಿಗಳಿಗೆ ಇದರ ಪರಿಚಯ ಇದ್ದೇ ಇರುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಮಾವು ಬಾಳೆ ಕಲ್ಲಂಗಡಿ ಸಹಿತ ವಿವಿಧ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಇದನ್ನು ಬಳಸಲಾಗುತ್ತಿದೆ. ಭಾರತ ಸೇರಿದಂತೆ ಹಲವು ದೇಶಗಳು ಇದರ ಬಳಕೆಗೆ ನಿಷೇಧ ಹೇರಿವೆ. ಆದರೆ ಮಾರುಕಟ್ಟೆಯಲ್ಲಿ ಇಂದಿಗೂ ಮುಕ್ತವಾಗಿ ಚಿಲ್ಲರೆ ರೂಪದಲ್ಲಿ ಇದರ ಮಾರಾಟ ನಡೆದಿದೆ. ಈ ಕಾರ್ಬೈಡ್‌ ಆರ್ಸೆನಿಕ್‌ ಮತ್ತು ಫಾಸ್ಪರಸ್‌ನಂತಹ ರಾಸಾಯನಿಕಗಳನ್ನು ಒಳಗೊಂಡಿದ್ದು ಇವು ಮಾನವ ದೇಹದ ಅಂಗಾಂಗಗಳಿಗೆ ಸಂಚಕಾರ ತರಬಲ್ಲವು. ಮುಖ್ಯವಾಗಿ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳನ್ನು ತಂದೊಡ್ಡಬಲ್ಲವು ಎಂಬುದನ್ನು ಈಚಿನ ವೈಜ್ಞಾನಿಕ ಸಂಶೋಧನೆಗಳು ನಿರೂಪಿಸಿವೆ.
ರಾಸಾಯನಿಕ ಬಳಸಿ ಮಾವಿಗೆ ಕೃತಕವಾಗಿ ಬಣ್ಣ ಕಟ್ಟಿ ಮಾರಲಾಗುತ್ತಿದೆ. ಇದು ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು ನಗರಪಾಲಿಕೆಯ ಅಧಿಕಾರಿಗಳು ದಾಳಿ ನಡೆಸಿ ಕ್ರಮ ಕೈಗೊಳ್ಳಬೇಕು.
ಎಚ್‌.ಆರ್. ದೊರೆಸ್ವಾಮಿ, ಸ್ಥಳೀಯ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT