ಹುಣಸೂರು: ಜೆಡಿಎಸ್ ಘೋಷಿತ ಅಭ್ಯರ್ಥಿ ಜಿ.ಡಿ.ಹರೀಶ್ ಗೌಡ ಅವರ ತಾಯಿ ಲಲಿತಾ ಜಿ.ಟಿ.ದೇವೇಗೌಡ ಅವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

‘ಏ.1 ರಂದು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದಲ್ಲಿ ಅನುಮತಿ ಪಡೆಯದೆ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಆಗ ಬೆಂಬಲಿಗರು ಪಕ್ಷದ ಪರ ಘೋಷಣೆ ಕೂಗಿದ್ದರು. ಆ ಸಂಬಂಧ ನೀಡಿದ್ದ ನೋಟಿಸ್ಗೆ ಲಲಿತಾ ಅವರು ಏ.5 ರಂದು ನೀಡಿದ್ದ ಉತ್ತರ ಸಮಂಜಸವಾಗಿರಲಿಲ್ಲ. ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಕಾಯ್ದೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿರುವುದರಿಂದ ಅವರು ಮತ್ತು ಬೆಂಬಲಿಗರ ವಿರುದ್ಧ ಏ.6 ರಂದು ಪ್ರಕರಣ ದಾಖಲಿಸಲಾಗಿದೆ’ ಎಂದು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಬಿ.ಕೆ.ಮನು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.