ಮೈಸೂರು: ಬಾಲಿವುಡ್ ನಟಿ ರಾಖಿ ಸಾವಂತ್ ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ ಆದಿಲ್ ಖಾನ್ ದುರಾನಿ ವಿರುದ್ಧ ಇಲ್ಲಿನ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾಗಿದೆ.

5 ವರ್ಷಗಳ ಹಿಂದೆ ಮೈಸೂರಿನಲ್ಲಿ ಫಾರ್ಮಸಿ ಓದಲು ಬಂದಿದ್ದ ಇರಾನ್ ದೇಶದ ವಿದ್ಯಾರ್ಥಿನಿಯನ್ನು ಆದಿಲ್ ಖಾನ್ ಪರಿಚಯ ಮಾಡಿಕೊಂಡಿದ್ದ. ಆತ ಮದುವೆ ಆಗುವುದಾಗಿ ನಂಬಿಸಿ ವಿ.ವಿ.ಪುರಂ ವಸತಿಯಲ್ಲಿ ಅತ್ಯಾಚಾರ ಎಸಗಿದ್ದ. ಬಳಿಕ ಖಾನ್ ಮಾತು ತಪ್ಪಿದ್ದಾನೆ. ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದಾಗ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆದಿಲ್ ಖಾನ್ ಮೇಲೆ ಅತ್ಯಾಚಾರ, ವಂಚನೆ, ಬೆದರಿಕೆ, ಬ್ಲಾಕ್ ಮೇಲ್ ಮಾಡಿದ ಆರೋಪ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.