ಮೈಸೂರು: ‘ಸುಪ್ರೀಂ ಕೋರ್ಟ್ ಸೂಚನೆಯಂತೆ ನಡೆಯುತ್ತಿರುವ ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ ಕುಟುಂಬಗಳ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ನಡೆಸಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘಟನೆಗಳ ಮುಖಂಡರ ಒಳಗೊಳ್ಳುವಿಕೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಕೃಷ್ಣ ಒತ್ತಾಯಿಸಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಈಗಾಗಲೇ ಸಮೀಕ್ಷೆ ಆರಂಭವಾಗಿದೆ. ಹೆಚ್ಚಿನ ಕಡೆ ಮಾಹಿತಿಯೇ ತಲುಪಿಲ್ಲ. ಜನಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಮುಖಂಡರನ್ನು ಸಮೀಕ್ಷಾ ಸಮನ್ವಯ ಸಮಿತಿ ಸದಸ್ಯರನ್ನಾಗಿ ಮಾಡಿ, ಅವರಿಗೆ ಕೋರ್ಟ್ ತೀರ್ಪಿನ ಮಾಹಿತಿ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ವಾಸ್ತವ ಅಂಕಿ–ಅಂಶ ದೊರೆಯುತ್ತದೆ’ ಎಂದರು.

‘ಈ ಹಿಂದೆ ಇಂಥ ಸಮೀಕ್ಷೆಗಳಲ್ಲಿ ಹಲವರ ಹೆಸರುಗಳು ಕೈಬಿಟ್ಟಿರುವುದು, ಅಧಿಕಾರಿಗಳು ತಪ್ಪು ಮಾಹಿತಿ ನೀಡಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿಯೇ ಸಮೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿದೆ. ಈಗಾಗಲೇ 2018, 2021ರಲ್ಲಿ ಸಮೀಕ್ಷೆಗಳು ನಡೆದಿದ್ದು, ಅಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ ಎಂದು ಗುರುತಿಸಿರುವ ಕುಟುಂಬಗಳಿಗೆ ಸರ್ಕಾರಿ ಕೆಲಸ, ಕನಿಷ್ಠ 2 ಎಕರೆ ಭೂಮಿ, ನಿವೇಶನ, ಮನೆ ಹಾಗೂ ಮಾಸಾಶನ ಸೌಲಭ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಮಹಾಸಭಾದ ಗೌರವಾಧ್ಯಕ್ಷ ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷ ಕೆ.ಪಳನಿಪ್ರಕಾಶ್, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಸುರೇಶ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಸುಮಲತಾ, ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ನಾಗಮಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.