ಮೈಸೂರು: ಪ್ರಸ್ತಕ ಸಾಲಿನ ಎಂಜಿನಿಯರಿಂಗ್ ಹಾಗೂ ವಿವಿಧ ವೃತ್ತಿಪರ ಕೋರ್ಸ್ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗುರುವಾರ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು.

‘ವಿದ್ಯಾರ್ಥಿಗಳು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆ ಬರೆದರು. ಎರಡು ಪರೀಕ್ಷೆಗಳಲ್ಲೂ ನೋಂದಾಯಿತ 17,137 ಅಭ್ಯರ್ಥಿಗಳ ಪೈಕಿ 13,042 ವಿದ್ಯಾರ್ಥಿಗಳು ಹಾಜರಾದರು. 4,095 ವಿದ್ಯಾರ್ಥಿಗಳು ಗೈರಾದರು. ಯಾವುದೇ ಪರೀಕ್ಷಾ ಕೇಂದ್ರದಲ್ಲೂ ಸಮಸ್ಯೆ ಉಂಟಾಗಿಲ್ಲ’ ಎಂದು ಡಿಡಿಪಿಯು ಎಂ.ಮರಿಸ್ವಾಮಿ ತಿಳಿಸಿದರು.

ಮೈಸೂರು ನಗರ ವ್ಯಾಪ್ತಿಯ 29 ಕೇಂದ್ರಗಳು ಸೇರಿದಂತೆ ಜಿಲ್ಲೆಯ 39 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಹಾಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು ಹೆಚ್ಚಿದ್ದು, ಹಿಂದಿನ ವರ್ಷದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಮೂಲಕ ಕಣ್ಗಾವಲು ಇಡಲಾಗಿತ್ತು. ಪೊಲೀಸ್ ಸಿಬ್ಬಂದಿ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟರು. ಕೈ ಗಡಿಯಾರ, ಮೊಬೈಲ್ ಫೋನ್, ಟ್ಯಾಬ್ಲೆಟ್, ಕ್ಯಾಲ್ಕುಲೇಟರ್, ಬ್ಲೂಟೂಥ್ ನಿರ್ಬಂಧಿಸಲಾಗಿತ್ತು. ಏ.19ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.