ಹುಣಸೂರು: ‘ಹೆಣ್ಣು ಮಗುವಿಗೆ ಉತ್ತಮ ಶಿಕ್ಷಣ ಕೊಡಿಸಿ ದೇಶದ ಆಸ್ತಿಯನ್ನಾಗಿಸಬೇಕು. ಈ ಮೂಲಕ ಸ್ವಾಭಿಮಾನದ ಬದುಕು ನಡೆಸಲು ಕುಟುಂಬದವರು ಕೈ ಜೋಡಿಸುವುದರಿಂದ ನಾರಿ ಶಕ್ತಿಗೆ ಒತ್ತು ನೀಡಿದಂತಾಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಸುಮಂಗಲ ಹೇಳಿದರು

ತಾಲ್ಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಜಾಗೃತಿ ಅಭಿಯಾನ ಉದ್ಘಾಟಿಸಿ ವರು ಮಾತನಾಡಿದರು.

ಹೆಣ್ಣು ಮಗುವನ್ನು ಸುಶಿಕ್ಷಿತರನ್ನಾಗಿಸಿದಲ್ಲಿ ತಮಗೆ ಬೇಕಾದ ರೀತಿ ಭವಿಷ್ಯ ರೂಪಿಸಿಕೊಳ್ಳುವ ಸಾಮಾನ್ಯ ಜ್ಞಾನ ಹೊಂದಿರುತ್ತಾರೆ. ಶಿಕ್ಷಣ ನೀಡುವ ಬದಲಿಗೆ ಕಂಕಣ ಭಾಗ್ಯ ನೀಡಿದರೆ ಹೆಣ್ಣು ಮಕ್ಕಳು ಸಮಾಜ ತಿಳಿಯುವ ಮುನ್ನವೇ ತಾಯಿಯಾಗಿ ಹಲವು ಸಮಸ್ಯೆಗಳಿಗೆ ತುತ್ತಾಗುತ್ತಾರೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕೆಲವು ಮೂಢನಂಬಿಕೆಯಿಂದ ಪೋಷಕರು ಹೆಣ್ಣು ಮಕ್ಕಳಿಗೆ ಹದಿಹರೆಯದಲ್ಲೇ ಬಾಲ್ಯ ವಿವಾಹ ಮಾಡಿ ಜವಾಬ್ದಾರಿಯಿಂದ ಮುಕ್ತರಾಗುವ ಮನಸ್ಥಿತಿ ಕಾಣುತ್ತಿದ್ದೇವೆ. ಈ ರೀತಿಯ ಪ್ರಕರಣದಿಂದ ಹೆಣ್ಣು ಮಕ್ಕಳು 18 ವರ್ಷಕ್ಕೂ ಮುನ್ನ ಗರ್ಭ ಧರಿಸಿ ತಾಯಂದಿರಾಗುವ ಘಟನೆ ಈಗಲೂ ಅಲ್ಲಲ್ಲಿ ಕಾಣಿಸುತ್ತಿದೆ. ಈ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಲು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಕಾಂತ್ ಹೇಳಿದರು.

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಅಕ್ಷರ ಜ್ಞಾನವಿದ್ದರೆ ಕುಟುಂಬ ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿ ಸರ್ವತೋಮುಖ ಅಭಿವೃದ್ಧಿಗೆ ಹೆಣ್ಣು ಮಕ್ಕಳು ಆಧಾರ ಆಗುವರು ಎಂದು ಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಹೇಳಿದರು.

ಜಾಗೃತಿ: ಗ್ರಾಮದಲ್ಲಿ ಸುಶಿಕ್ಷಿತ ಹಿರಿಯರು ಬಾಲ್ಯ ವಿವಾಹ ನಡೆಯದಂತೆ ಜಾಗೃತಿಗೊಳಿಸಬೇಕಾದ ಸಾಮಾಜಿಕ ಜವಾಬ್ದಾರಿ ಹೊರಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಶಿಕ್ಷಕರು ಮತ್ತು ಇಲಾಖೆ ನಡೆಸುತ್ತಿದ್ದು, ಸ್ಥಳಿಯರು ನಿಮ್ಮ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹದಿಂದಾಗುವ ಸಮಸ್ಯೆ ಕುರಿತು ಎಚ್ಚರಿಸಿದಲ್ಲಿ ಈ ಅನಿಷ್ಟ ಪದ್ಧತಿಗೆ ಅಂತ್ಯ ಹಾಡಲು ಸಾಧ್ಯ ಎಂದರು.

ಗ್ರಾಮದ ಪ್ರಮುಖ ಬೀದಿಯಲ್ಲಿ ಶಾಲಾ ಮಕ್ಕಳು ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಕಡ್ಡಾಯ ಶಿಕ್ಷಣ ಕುರಿತು ಘೋಷಣೆಯೊಂದಿಗೆ ಅಭಿಯಾನ ಜಾಥಾ ನಡೆಸಿದರು. ಜಾಥಾದಲ್ಲಿ ಶಾಲಾ ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.