ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭಾನುವಾರ ಬೆಳಿಗ್ಗೆ ಆಗಮಿಸಿ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡಿದರು.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರೊಂದಿಗೆ ಬಂದಿಳಿದ ಅವರನ್ನು ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್.ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಬರಮಾಡಿಕೊಂಡರು. ಮುಡಾ ಅಧ್ಯಕ್ಷ ಕೆ.ಮರೀಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ ಸ್ವಾಗತಿಸಿದರು.

ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದ ಸಿಎಂ, ರಸ್ತೆ ಮಾರ್ಗವಾಗಿ ಜಯಪುರ ಬಳಿಯ ಟಿ.ಕಾಟೂರಿನ ತೋಟದ ಮನೆಗೆ ತೆರಳಿದರು. ಅಲ್ಲಿ ಪುತ್ರ ರಾಕೇಶ್ ಅವರ ವಾರ್ಷಿಕ ಪುಣ್ಯತಿಥಿ ಕಾರ್ಯಕ್ರಮ ನಡೆಯಿತು. ಕುಟುಂಬದವರು, ನೆಂಟರು ಹಾಗೂ ಆಪ್ತರನ್ನು ಹೊರತುಪಡಿಸಿ ಬೇರೆಯವರಿಗೆ ಪ್ರವೇಶವಿರಲಿಲ್ಲ. ಪತ್ನಿ ಪಾರ್ವತಿ, ಸೊಸೆ ಸ್ಮಿತಾ, ಮತ್ತೊಬ್ಬ ಪುತ್ರ ಡಾ.ಯತೀಂದ್ರ, ಮೊಮ್ಮಗ ಧವನ್ ಭಾಗವಹಿಸಿದ್ದರು.

ಮುಖ್ಯಮಂತ್ರಿಯು, ಸೋಮವಾರ ಕೆಆರ್ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.