ನಂಜನಗೂಡು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಮಾಜಿ ಸಂಸದ ದಿ. ಆರ್.ಧ್ರುವನಾರಾಯಣ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯನ್ನು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವಾರು ಸಚಿವರು, ಶಾಸಕರುಗಳು ಪುಣ್ಯ ಸ್ಮರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್ ಧ್ರುವನಾರಾಯಣ, ಮಾರ್ಚ್ 12 ರ ಮಂಗಳವಾರ ಬೆಳಗ್ಗೆ 10.30ಕ್ಕೆ ಹೆಗ್ಗವಾಡಿ ಗ್ರಾಮದಲ್ಲಿ ನಡೆಯಲಿರುವ ದಿ. ಆರ್.ಧ್ರುವನಾರಾಯಣ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ,ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು, ಆರ್.ಧ್ರುವನಾರಾಯಣ್ ಅವರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಭಿಮಾನಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ‘ ಎಂದರು.

‘ಸ್ಥಳೀಯ ಜಾನಪದ ಕಲಾವಿದರಿಂದ ಗೀತ ಗಾಯನ, ಸುಗಮ ಸಂಗೀತ ಕಾರ್ಯಕ್ರಮ, ಮದ್ಯಾಹ್ನ 1ಗಂಟೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.