ಮೈಸೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯವರು ನೀಡಿದ್ದರು ಎನ್ನಲಾದ 'ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ' ಎಂಬ ಶೀರ್ಷಿಕೆಯ ಜಾಹೀರಾತಿನ ಪ್ರತಿಯನ್ನು ಕಾಂಗ್ರೆಸ್‌ನಿಂದ ಫ್ಲೆಕ್ಸ್ ಮಾಡಿ ಹಾಕಲಾಗಿದೆ.

ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ಮೆಟ್ರೋಪೋಲ್ ವೃತ್ತದಲ್ಲಿ ಸಾರ್ವಜನಿಕರ ಗಮನಸೆಳೆಯುವ ರೀತಿಯಲ್ಲಿ ಫ್ಲೆಕ್ಸ್ ಹಾಕಲಾಗಿದೆ.

ಇದನ್ನು ಖಂಡಿಸಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕೂಡಲೇ ತೆರವುಗೊಳಿಸಬೇಕು ಎಂದು ಪ್ರತಿಭಟನೆ ನಡೆಸಿದರು. ಮಹೇಶ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
.ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪಿತೂರಿ: ಕಾಂಗ್ರೆಸ್ ಮುಖಂಡರ ಆರೋಪ.
ಇಲ್ಲಿ ಅಹಿತಕರ ಘಟನೆ ನಡೆಯುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ಹೀಗಾಗಿ, ನಿಮ್ಮನ್ನು ವಶಕ್ಕೆ ಪಡೆಯುತ್ತಿದ್ದೇವೆ’ ಎಂದು ಎಸಿಪಿ ಶಾಂತಮಲ್ಲಪ್ಪ ಹೇಳಿದರು.

ಆತ್ಮಹತ್ಯೆಗೆ ಯತ್ನ: ಸಾ.ರಾ.ಮಹೇಶ್ ಬಂಧನ ಖಂಡಿಸಿ ಪಕ್ಷದ ಕೆ.ಆರ್. ನಗರ ಘಟಕದ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಶುಕ್ರವಾರ ಮೈಮೇಲೆ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.