ಮೈಸೂರು: ‘ನಿಗಮ–ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ‘ಉಪ ಚುನಾವಣೆ ಬಳಿಕ ಪಟ್ಟಿ ಪ್ರಕಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಕಾರ್ಯಕರ್ತರಿಗೆ ವಿಸಿಟಿಂಗ್ ಕಾರ್ಡ್ ಪಡೆದುಕೊಳ್ಳಲು ಹಾಗೂ ಇಂಥದೊಂದು ಸ್ಥಾನ ಸಿಕ್ಕಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಅವಕಾಶವಾಗಲಿದೆ’ ಎಂದರು.

‘ನಿಗಮ–ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರನ್ನು ಮುಖ್ಯಮಂತ್ರಿ ನೇಮಿಸಿದ್ದಾರೆ. ಸದಸ್ಯರು, ನಿರ್ದೇಶಕರ ಸ್ಥಾನಕ್ಕೆ ಶಾಸಕರಿಂದ ಕಡ್ಡಾಯವಾಗಿ ಒಬ್ಬ ಮಹಿಳೆ ಸೇರಿದಂತೆ ಮೂರು ಹೆಸರನ್ನು ಪಡೆದಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತವರಿಂದ ಶಿಫಾರಸಾದ ಎರಡು ಹೆಸರು, ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಶಿಫಾರಸನ್ನೂ ಪರಿಗಣಿಸಲಾಗಿದೆ. ಮುಖ್ಯಮಂತ್ರಿಯಿಂದಲೂ ಒಂದಷ್ಟು ಹೆಸರುಗಳು ಬಂದಿವೆ. ಎರಡು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಆದ್ಯತೆ ದೊರೆತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.