ಮೈಸೂರು: ‘ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಂಜನಗೂಡಿನಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ನೀಡಿರುವ ಹೇಳಿಕೆಯು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಡಿದೆ.

‘ನಮಗೆ ಅನುಕೂಲವಾಗಲೆಂದು ನಂಜಪ್ಪ ಈ ಈ ಕಾರ್ಯಕ್ರಮ ಮಾಡಿದ್ದರು. ತಂದೆಯವರು ಪ್ರಚಾರದ ಬ್ಯುಸಿಯಲ್ಲಿದ್ದರೂ, 2–3 ಬಾರಿ ಬಂದು ಭೇಟಿಯಾಗಿ, ಹಲವು ಬಾರಿ ದಿನಾಂಕ ನಿಗದಿಯಾಗಿ ರದ್ದಾದರೂ ಪಟ್ಟು ಬಿಡದೇ ನನ್ನ ತಂದೆಯವರಿಂದಲೇ ಕೊಡಿಸಿ ಕಾರ್ಯಕ್ರಮ ಯಶಸ್ವಿಯಾಗಿಸಿದರು. ಸಮಾಜದ ಮತಗಳು ನಮಗೆ ಹೆಚ್ಚಿನ ಪ್ರಮಾಣದಲ್ಲಿ ಸಿಗುವಂತೆ ಮಾಡಿದರು. ನಾನು ಆ ಕಾರ್ಯಕ್ರಮಕ್ಕೆ ಬರಲಾಗಿರಲಿಲ್ಲ’ ಎಂದು ಹೇಳಿದ್ದಾರೆ.

‘ನಾವು ಗೆಲ್ಲಲು ಮಡಿವಾಳ ಸಮಾಜದ ದೊಡ್ಡ ಕೊಡುಗೆ ನೀಡಿದೆ. ಈ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದ್ದಾರೆ.

ಯತೀಂದ್ರ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.