ಮೈಸೂರು: ‘ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳ ಅಭಿಮಾನ್ ಸ್ಟುಡಿಯೊದಲ್ಲಿ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘಗಳ ಒಕ್ಕೂಟದಿಂದ ಡಿ.17ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ’ ಎಂದು ವಿಷ್ಣುಸೇನಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ವಿಷಯಕ್ಕೆ ಸಂಬಂಧಿಸಿದಂತೆ ಡಿ.15ರಂದು ಸಂಜೆ 5.30ಕ್ಕೆ ಇಲ್ಲಿನ ಚಾಮುಂಡಿಪುರಂನ ಅಪೂರ್ವ ಹೋಟೆಲ್ನಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ವಿಷ್ಣು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು’ ಎಂದು ಮನವಿ ಮಾಡಿದರು.

‘ಪ್ರತಿಭಟನೆಯಲ್ಲಿ 30 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಮದನ್ ಕುಮಾರ್, ಸದಸ್ಯರಾದ ಲಯನ್ ಸುರೇಶ್, ಮಹೇಂದರ್, ಸಿದ್ದಪ್ಪ, ಸಂತೋಷ್, ಪರಮೇಶ್, ಬಾಬು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.