ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ಮಂಗಳವಾರ ಶಶಿಕುಮಾರ್ ಎಂಬುವವರ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಬೆಳೆ ನಾಶವಾಗಿದೆ.

ಶಶಿಕುಮಾರ್ ಅವರ ಜಮೀನಿನಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲಾಗಿದ್ದು, ಪರಿವರ್ತಕದಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕಬ್ಬಿಗೆ ತಾಗಿದ ಪರಿಣಾಮ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಡ್ರಿಪ್ ಪೈಪ್ ಸೇರಿದಂತೆ ಹಲವು ಕೃಷಿ ಉಪಕರಣಗಳು ಸುಟ್ಟು ನಾಶವಾಗಿದೆ.

ಏಳು ಲಕ್ಷದವರೆಗೆ ನಷ್ಟ ಉಂಟ್ಟಾಗಿದೆ. ಸರ್ಕಾರ ಸೂಕ್ತ ಪರಿಹಾರವನ್ನು ನೀಡಬೇಕೆಂದು ರೈತ ಶಿವಕುಮಾರ್ ಒತ್ತಾಯಿಸಿದ್ದಾರೆ.

ಅಗ್ನಿಶಾಮಕದಳ ಘಟನಾ ಸ್ಥಳಕ್ಕೆ ಬರುವ ವೇಳೆಗಾಗಲೇ ಕಬ್ಬು ಬೆಳೆ ಸುಟ್ಟು ಭಸ್ಮವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.