ಮೈಸೂರು: ‘ವಿಶ್ವ ರೈತ ದಿನದ ಅಂಗವಾಗಿ ಡಿ.23ರಂದು ಮೈಸೂರಿನಲ್ಲಿ ರಾಷ್ಟ್ರೀಯ ರೈತ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ದೇಶದ ವಿವಿಧ ರಾಜ್ಯಗಳ ನೂರಾರು ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

‘ಎಲ್ಲ ಸರ್ಕಾರಗಳೂ ರೈತರಿಗೆ ಮೋಸ ಮಾಡಿವೆ; ಮಾಡುತ್ತಿವೆ. ಇದರಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಕಾರ್ಪೊರೇಟ್ ಕಂಪನಿಗಳು ಕೃಷಿ ವಲಯವನ್ನು ವಶಪಡಿಸಿಕೊಳ್ಳಲು ವಾಮಮಾರ್ಗಗಳನ್ನು ಬಳಸುತ್ತಿವೆ. ಮುಂದಿನ ದಿನಗಳಲ್ಲಿ ರೈತ ಕುಲವನ್ನು ಅಪಾಯದಿಂದ ಪಾರು ಮಾಡಲು ಚಿಂತಿಸಬೇಕಾಗಿದೆ. ಅದಕ್ಕಾಗಿ ರೈತ ಸಮಾವೇಶ ಆಯೋಜಿಸಲಾಗಿದೆ’ ಎಂದರು.

‘ಶುಂಠಿ ಬೆಳೆದ ರೈತರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಕಳೆದ ವರ್ಷ ಚೀಲಕ್ಕೆ ₹5 ಸಾವಿರ ದರ ಇತ್ತು. ಪ್ರಸಕ್ತ ಸಾಲಿನಲ್ಲಿ ₹1,600ಕ್ಕೆ ಇಳಿಕೆಯಾಗಿದೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲೆಂದು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ ಕಾನೂನು ಜಾರಿಗೆ ತರಬೇಕೆಂದು ದೆಹಲಿಯಲ್ಲಿ ರೈತ ಹೋರಾಟ ನಡೆಸಲಾಗುತ್ತಿದೆ. ಇದೇ ತಿಂಗಳು 25ರಿಂದ ನಡೆಯಲಿರುವ ಸಂಸತ್ ಅಧಿವೇಶನದ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯು ದೇಶದಾದ್ಯಂತ ರೈತ ಚಳವಳಿಯನ್ನು ತೀವ್ರಗೊಳಿಸಲು ತೀರ್ಮಾನಿಸಿದೆ’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರ 8 ತಿಂಗಳಿಂದ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸಿದೆ. ಆದರೆ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಜೊತೆಗೆ ಪ್ರೋತ್ಸಾಹಧನವಾಗಿ ₹500 ಹೆಚ್ಚುವರಿಯಾಗಿ ನೀಡಲು ಮುಖ್ಯಮಂತ್ರಿ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ನೀಲಕಂಠಪ್ಪ, ಪೈಲ್ವಾನ್ ವೆಂಕಟೇಶ್ ಹಾಗೂ ಸೂರಿ ಉಮೇಶ್ ಪಾಲ್ಗೊಂಡಿದ್ದರು.

‘ರೈತರಿಗೆ ಅನ್ಯಾಯವಾದರೆ ಹೋರಾಟ’

‘ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಮುಡಾ ಸಭೆಯಲ್ಲಿ 50:50 ಅನುಪಾತದಡಿ ಹಂಚಿಕೆಯಾದ ನಿವೇಶನಗಳನ್ನು ರದ್ದುಪಡಿಸಲು ಒಲವು ವ್ಯಕ್ತವಾಗಿದೆ. ಇದರಿಂದ ಜಮೀನು ಕಳೆದುಕೊಂಡ ನೈಜ ರೈತರಿಗೆ ತೊಂದರೆ ಉಂಟು ಮಾಡಬಾರದು. ರೈತರಿಗೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ’ ಎಂದು ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.

‘ಎರಡು ವರ್ಷಗಳ ಹಿಂದೆ ಮುಡಾ ಕಚೇರಿಯಲ್ಲಿ ಕಡತಗಳು ಕಳವಾದಾಗ ನಮ್ಮ ಸಂಘಟನೆಯಿಂದ ಪ್ರತಿಭಟಿಸಿ ಎಚ್ಚರಿಸಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡಿದ ಪರಿಣಾಮ ಹಗರಣಗಳು ನಡೆದಿವೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.