ಮೈಸೂರು: ‘ರೈತರಿಗೆ ರಿಯಾಯಿತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ (ರಾಷ್ಟ್ರೀಯ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್) ರಾಜ್ಯಕ್ಕೆ ಈ ಬಾರಿ ಶೇ 58ರಷ್ಟು ಕಡಿತಗೊಳಿಸಿದೆ. ಈ ಮೂಲಕ ನಮ್ಮ ರೈತರಿಗೆ ಮಾಡಿರುವ ಅನ್ಯಾಯ ಖಂಡಿಸಿ ಡಿಸೆಂಬರ್ನಲ್ಲಿ ಬೆಂಗಳೂರಿನ ನಬಾರ್ಡ್ ಕಚೇರಿ ಎದುರು ಪ್ರತಿಭಟಿಸಲಾಗುವುದು’ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

‘ಡಿ.6ರಂದು ಬೆಂಗಳೂರಿನಲ್ಲಿ ರೈತ ಸಂಘದ ರಾಜ್ಯ ಕಾರ್ಯಕಾರಿಣಿ ಆಯೋಜಿಸಲಾಗಿದ್ದು, ನಬಾರ್ಡ್ ಕಚೇರಿ ಎದುರು ಯಾವಾಗ ಪ್ರತಿಭಟಿಸಬೇಕು ಎಂಬುದನ್ನು ಅಲ್ಲಿ ನಿರ್ಧರಿಸಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ನಬಾರ್ಡ್ ನೆರವು ಕಡಿತವು ಎಂಡಿಸಿ ಬ್ಯಾಂಕ್ಗಳು, ಸಹಕಾರ ಸಂಘಗಳು ಹಾಗೂ ಇನ್ನಿತರೆ ಬ್ಯಾಂಕ್ಗಳ ಮೇಲೆ ಪರಿಣಾಮ ಬೀರುತ್ತವೆ. ಹೀಗಾಗಿ ರೈತರು ಸಾಲ ಪಡೆಯಲು ಸಾಧ್ಯವಾಗದೇ ಖಾಸಗಿ ವ್ಯಕ್ತಿಗಳ ಮೊರೆ ಹೋಗಬೇಕಾಗುತ್ತದೆ. ಅವುಗಳ ಬಡ್ಡಿ ದರ, ದಮನಕಾರಿ ನೀತಿಯಿಂದಾಗಿ ಈಗಾಗಲೇ ಬಹಳಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಮುಂದುವರಿಯುತ್ತದೆ’ ಎಂದು ಆರೋಪಿಸಿದರು.

‘ವಕ್ಫ್ ಎಂಬುದು ಅಲ್ಪ ಸಂಖ್ಯಾತರಿಗೆ ಸಂಬಂಧಿಸಿದ ಕಾನೂನು, ಸಂಸ್ಥೆ. ಇದರ ಆಸ್ತಿಯನ್ನು ಮುಸ್ಲಿಮರೇ ಹೆಚ್ಚು ಒತ್ತುವರಿ ಮಾಡಿಕೊಂಡಿದ್ದಾರೆ. ಆದರೆ, ವಕ್ಫ್ನಿಂದಾಗಿ ರೈತರು ಜಮೀನು ಕಳೆದುಕೊಳ್ಳಲು ರೈತ ಸಂಘ ಬಿಡುವುದಿಲ್ಲ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರೂ ರೈತರಿಗೆ ಹಕ್ಕುಪತ್ರ ನೀಡಬೇಕು. ಒಂದು ವೇಳೆ ಈ ರೀತಿ ಮಾಡದಿದ್ದಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಮುಖಂಡರಾದ ಪಿ.ಮರಂಕಯ್ಯ, ಹೊಸೂರು ಕುಮಾರ್, ನೇತ್ರಾವತಿ, ಮಂಡಕಳ್ಳಿ ಮಹೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.