ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಇಲ್ಲಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ನಿವೇಶನ ಖರೀದಿಸಿದ ಸಂದರ್ಭ, ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡಿದ್ದಾರೆ. ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ ಪ್ರಕರಣಗಳಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖವಾಗುತ್ತದೆ. ಆದರೆ ಖರೀದಿದಾರರೇ ಶುಲ್ಕ ಪಾವತಿಸಿದ್ದಾರೆ. ಸ್ನೇಹಮಯಿ ಕೃಷ್ಣ ಆರೋಪ ನಿರಾಧಾರವಾಗಿದೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೋರಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಮಂಗಳವಾರ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಎನ್ಸಿಆರ್ ದೂರು ದಾಖಲಿಸಿದ್ದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬಿಎನ್ಎಸ್ ಕಾಯ್ದೆ ಸೆಕ್ಷನ್ 353 (1) (ಬಿ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.