ಎಚ್.ಡಿ.ಕೋಟೆ: ಪಟ್ಟಣದಲ್ಲಿ ನ.12ರಂದು ನಡೆಯುವ ಆದಿಕವಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಚಿಕ್ಕಮಾದು ಅಭಿಮಾನಿ ಬಳಗದ ಅಧ್ಯಕ್ಷ ಜಿನ್ನಹಳ್ಳಿ ರಾಜನಾಯಕ ತಿಳಿಸಿದರು.

ರಾಜನಹಳ್ಳಿ ಮಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಅನಿಲ್ ಚಿಕ್ಕಮಾದು ವಹಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮತ್ತು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸ್ತಬ್ಧ ಚಿತ್ರಗಳಿಗೆ ಬಹುಮಾನ ವಿತರಿಸಲಿದ್ದು, ಸಂಸದರು, ಶಾಸಕರು, ವಿವಿಧ ಸಮಾಜಗಳ ಮುಖಂಡರು, ವಿವಿಧ ಸಂಘಟನೆಗಳ ಅಧ್ಯಕ್ಷರು ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ನಡೆಯುವ ಮೆರವಣಿಗೆಯಲ್ಲಿ 15ಕ್ಕೂ ಹೆಚ್ಚಿನ ಕಲಾತಂಡಗಳು ಭಾಗವಹಿಸಲಿದ್ದು, ವಿವಿಧ ಗ್ರಾಮಗಳಿಂದ 20ಕ್ಕೂ ಹೆಚ್ಚಿನ ಸ್ತಬ್ಧ ಚಿತ್ರಗಳು ಭಾಗವಹಿಸಲಿದ್ದು, ಉತ್ತಮ ಮೂರು ಚಿತ್ರಗಳಿಗೆ ಮೊದಲ ಬಹುಮಾನ ₹50 ಸಾವಿರ, ದ್ವಿತೀಯ ಬಹುಮಾನ ₹25 ಸಾವಿರ ಮತ್ತು ಮೂರನೇ ಬಹುಮಾನ ₹10 ಸಾವಿರವನ್ನು ಬಹುಮಾನವನ್ನು ಶಾಸಕ ಅನಿಲ್ ಚಿಕ್ಕಮಾದು ಘೋಷಿಸಿದ್ದಾರೆ.

ಸೆನೆಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು, ಶಂಭುಲಿಂಗನಾಯಕ, ಚಿಕ್ಕವೀರನಾಯಕ, ಸಿದ್ದನಾಯಕ, ಕೃಷ್ಣ ನಾಯಕ, ದಾಸನಾಯಕ, ಮಹೇಶ್ ನಾಯಕ, ಜಯಪ್ಪ, ಸೋಮಣ್ಣ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.