ಮೈಸೂರು: ನ್ಯಾಯಯುತವಾದ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ, ಕ್ಷೇಮಾಭಿವೃದ್ಧಿ ನೌಕರರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯ ದಿನಗೂಲಿ ನೌಕರರು ಇಲ್ಲಿನ ಅರಣ್ಯ ಇಲಾಖೆಯ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿ ವರ್ಷ ಹೆಚ್ಚಳವಾಗುವ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇಲೆ ಕನಿಷ್ಠ ವೇತನ ಕಾಯ್ದೆಯಡಿ ವೇತನ ನಿಗದಿಪಡಿಸಿ ಕಾರ್ಮಿಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರಂತೆ ರಾಜ್ಯದ ಬಹುತೇಕ ಇಲಾಖೆಗಳ ದಿನಗೂಲಿ ನೌಕರರಿಗೆ ವೇತನ ನೀಡಲಾಗುತ್ತಿದೆ. ಆದರೆ, ಅರಣ್ಯ ಇಲಾಖೆ ಈ ಸುತ್ತೋಲೆಯನ್ನು ಗಾಳಿಗೆ ತೂರಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.

ದಿನಗೂಲಿ ಪದ್ಧತಿಯಿಂದ ಹೊರಗುತ್ತಿಗೆ ಪದ್ಧತಿಗೆ ಬದಲಾವಣೆ ಮಾಡಿ ನೌಕರರ ಸೇವಾಭದ್ರತೆಗೆ ಧಕ್ಕೆ ಮಾಡಿರುವುದು ಸರಿಯಲ್ಲ. ಈ ಕೂಡಲೇ ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರಿಗೆ ಭವಿಷ್ಯನಿಧಿ, ಆರೋಗ್ಯ ವಿಮೆ ನೀಡುತ್ತಿಲ್ಲ. ದಿನಗೂಲಿ ಮತ್ತು ಪಿಸಿಪಿ ನೌಕರರ ಹೆಸರಿನಲ್ಲಿ ದಾಖಲೆಗಳನ್ನೇ ನಿರ್ವಹಿಸದೇ ಗುತ್ತಿಗೆ ಹೆಸರಿನಲ್ಲಿ ವಂಚನೆ ಎಸಗಲಾಗುತ್ತಿದೆ ಎಂದು ಅವರು ದೂರಿದರು.

ಅರಣ್ಯ ಇಲಾಖೆಯ ವಿವಿಧ ವಲಯಗಳಲ್ಲಿ ದಿನಗೂಲಿ ನೌಕರರಾಗಿ ಕಳೆದ 20 ವರ್ಷಗಳಿಂದ ನೆಡುತೋಪು, ರಕ್ಷಣಾ ಶಿಬಿರ, ಸಸ್ಯ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ನ್ಯಾಯಸಮ್ಮತವಾಗಿ ಸಿಗಬೇಕಾದ ಇಲಾಖೆಯ ದರಪಟ್ಟಿಯಂತೆ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ದಿನಗೂಲಿ ನೌಕರರು ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದಕ್ಕೆ ಇಲಾಖೆಯಲ್ಲಿರುವ ಕೆಳಹಂತದ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಆದೇಶವನ್ನು ಪಾಲನೆ ಮಾಡದಿರುವುದೇ ಕಾರಣ ಎಂದು ಅವರು ಆರೋಪಿಸಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎ.ಎಂ.ನಾಗರಾಜು, ಕಾರ್ಯದರ್ಶಿ ನಂಜುಂಡಸ್ವಾಮಿ, ಉಪಾಧ್ಯಕ್ಷ ರುದ್ರಪ್ಪ, ಮಂಡ್ಯ ಜಿಲ್ಲೆಯ ಉಪಾಧ್ಯಕ್ಷ ಸತೀಶ್, ಕೆ.ಆರ್.ಪೇಟೆಯ ಭಾಗ್ಯಮ್ಮ ಸೇರಿದಂತೆ 60 ಮಂದಿ ನೌಕರರು ಪ್ರತಿಭಟನೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.