ಮೈಸೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ (76) ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು.

ಮೂತ್ರಕೋಶದ ಸೋಂಕಿನ ಕಾರಣಕ್ಕೆ ಅವರು ಏ. 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಸೋಮವಾರ ಮುಂಜಾನೆ 1.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೈಸೂರಿನ ಜಯಲಕ್ಷ್ಮಿಪುರಂನ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗುತ್ತಿದ್ದು, ಬೆಳಿಗ್ಗೆ 8ರ ನಂತರ ಅಂತಿಮ ದರ್ಶನಕ್ಕೆ ಇಡಲಾಗುವುದು.
.ದಲಿತರ ದಿಟ್ಟ ದನಿಯಾಗಿ ಬೆಳೆದ ಜನಸಂಘದ ಕಾರ್ಯಕರ್ತ ಶ್ರೀನಿವಾಸ ಪ್ರಸಾದ್.
ಅವರಿಗೆ ಪತ್ನಿ ಭಾಗ್ಯಲಕ್ಷ್ಮಿ, ಪುತ್ರಿಯರಾದ ಪ್ರತಿಮಾ, ಪೂರ್ಣಿಮಾ, ಪೂನಂ ಹಾಗೂ ಅಳಿಯಂದಿರು ಇದ್ದಾರೆ.

1974ರಲ್ಲಿ ಕೆ.ಆರ್. ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡುವ ಮೂಲಕ ರಾಜಕಾರಣ ಪ್ರವೇಶಿಸಿದ್ದ ಪ್ರಸಾದ್ ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 1999ರಿಂದ 2004ರವರೆಗೆ ಕೇಂದ್ರದಲ್ಲಿ ಆಹಾರ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. 2013ರಿಂದ 2016ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
.ಕಾಂಗ್ರೆಸ್ ‘ಕೋಟೆ’ಯಲ್ಲಿ ಮೊದಲ ಬಾರಿಗೆ ‘ಕಮಲ’ ಅರಳಿಸಿದ್ದ ಶ್ರೀನಿವಾಸ ಪ್ರಸಾದ್.
ನಂತರದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದ ಪ್ರಸಾದ್, 2019ರಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿದ್ದರು. ಈ ವರ್ಷ ಮಾರ್ಚ್ ನಲ್ಲಿ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದರು.
.ಶ್ರೀನಿವಾಸ ಪ್ರಸಾದ್ ನಿಧನ ಸಾಮಾಜಿಕ ನ್ಯಾಯದ ರಾಜಕೀಯ ಹೋರಾಟಕ್ಕೆ ಹಿನ್ನಡೆ: ಸಿಎಂ.ರಾಜಕೀಯ ಜೀವನದ ಬಗ್ಗೆ ಪುಸ್ತಕ: ಶ್ರೀನಿವಾಸ ಪ್ರಸಾದ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.