ಮೈಸೂರು: ‘ಇಲ್ಲಿನ ಆಡಳಿತ ತರಬೇತಿ ಸಂಸ್ಥೆ (ಎಟಿಐ)ಯ ಅತಿಥಿ ಗೃಹದಲ್ಲಿನ ಪೀಠೋಪಕರಣ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸರ್ಕಾರಿ ಸ್ವತ್ತು ಕಳವು ಹಾಗೂ ದುರುಪಯೋಗ ಸಂಬಂಧ ಪ್ರಕರಣ ದಾಖಲಿಸಬೇಕು’ ಎಂದು ಮಾಜಿ ಉಪ ಮೇಯರ್ ವಿ.ಶೈಲೇಂದ್ರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಟಿಐ ಮಹಾನಿರ್ದೇಶಕರಿಗೆ ಬರೆದಿರುವ ಪತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಿದ ಅವರು, ‘ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

‘ರೋಹಿಣಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗವಾಗಿ ಬಂದಾಗ ಎಟಿಐ ಅತಿಥಿ ಗೃಹದಲ್ಲಿ ತಂಗಿದ್ದರು. ಅವರು ಜಿಲ್ಲಾಧಿಕಾರಿ ನಿವಾಸಕ್ಕೆ ತೆರಳಿದ ನಂತರ, ಎಟಿಐ ವಸತಿಗೃಹದಲ್ಲಿನ ಸಾಮಗ್ರಿಗಳು ನಾಪತ್ತೆಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಒಟ್ಟು 23 ಸಾಮಗ್ರಿಗಳಿಗೆ ₹ 77,296 ಆಗುತ್ತದೆ. ಅದನ್ನು ರೋಹಿಣಿ ಅವರ ವೇತನದಿಂದ ಕಡಿತಗೊಳಿಸಿ ಸಂಸ್ಥೆಗೆ ಜಮಾ ಮಾಡುವಂತೆ ಅಲ್ಲಿನ ಅಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ವೇತನದಿಂದ ಹಣ ಪಡೆಯುವ ಬದಲಿಗೆ, ಪಾರಂಪರಿಕವಾದ ಸಾಮಗ್ರಿಗಳನ್ನು ವಾಪಸ್ ಪಡೆಯಲು ಕ್ರಮ ವಹಿಸಬೇಕು’ ಎಂದು ಕೋರಿದರು.

‘ಸಾಮಾನ್ಯ ವ್ಯಕ್ತಿ ಆಗಿದ್ದರೆ ಕಳವು ಪ್ರಕರಣ ದಾಖಲಿಸಲಾಗುತ್ತಿತ್ತು. ಕಾನೂನು ಎಲ್ಲರಿಗೂ ಒಂದೇ. ಆದ್ದರಿಂದ, ಈ ಐಎಎಸ್ ಅಧಿಕಾರಿ ವಿರುದ್ಧವೂ ಇಂತದ್ದೇ ಪ್ರಕರಣ ದಾಖಲಿಸಬೇಕು. ಲೋಕಾಯುಕ್ತಕ್ಕೂ ದೂರು ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.