ಮೈಸೂರು: ‘ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡರು ನಮ್ಮ ನಾಯಕರು. ಅವರು ಪಕ್ಷದಲ್ಲೇ ಇದ್ದು, ಎಲ್ಲ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುತ್ತಾರೆ’ ಎಂದು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಹೇಳಿದರು.

ಜೆಡಿಎಸ್ ತೊರೆಯುವಂತೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿರುವ ಕುರಿತು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ‘ಚನ್ನಪಟ್ಟಣ ಉಪಚುನಾವಣೆಯಲ್ಲಿ ಪ್ರಚಾರ ನಡೆಸಲು ಎರಡನೇ ಹಂತದ ನಾಯಕರಿಗೆ ಎಚ್.ಡಿ.ಕುಮಾರಸ್ವಾಮಿ ಅವಕಾಶ ನೀಡಿದ್ದಾರೆ. ಅದಕ್ಕಾಗಿ ಜಿ.ಟಿ. ದೇವೇಗೌಡರನ್ನು ಕರೆಯದಿರಬಹುದು. ಆದರೆ, ರಾಜ್ಯ ಜೆಡಿಎಸ್ನಲ್ಲಿ ದೇವೇಗೌಡರಿಗೆ ಕುಮಾರಸ್ವಾಮಿ ನಂತರದ ಸ್ಥಾನವಿದೆ. ದೇವೇಗೌಡ ದಂಪತಿಯು ಈಚೆಗೆ ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿಖಿಲ್ ಗೆಲುವಿಗೆ ಪ್ರಾರ್ಥಿಸಿದ್ದಾರೆ’ ಎಂದರು.

‘ಎಚ್.ಡಿ. ದೇವೇಗೌಡರು ಒಕ್ಕಲಿಗ ನಾಯಕರನ್ನು ತುಳಿದಿದ್ದಾರೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಎಚ್.ಡಿ. ದೇವೇಗೌಡರ ಬಗ್ಗೆ ಮಾತನಾಡುವಾಗ ಸಿದ್ದರಾಮಯ್ಯ ಎಚ್ಚರಿಕೆಯಿಂದ ಇರಬೇಕು. ಇಂದು ಅವರ ಎಡಬಲದಲ್ಲಿರುವವರನ್ನೂ ಬೆಳೆಸಿದ್ದು ದೇವೇಗೌಡರೇ. ಸಿದ್ದರಾಮಯ್ಯನವರನ್ನು ರಾಜ್ಯಕ್ಕೆ ಪರಿಚಯಿಸಿದ್ದೂ ಅವರೇ’ ಎಂದರು.

‘ಕುಮಾರಸ್ವಾಮಿ ಅವರನ್ನು ಜರಿದಿರುವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು. ಚುನಾವಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.