ಮೈಸೂರು: ಹೊರವಲಯದ ಹೆಬ್ಬಾಳ ರಿಂಗ್ ರಸ್ತೆಯ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ಆಯೋಜಿಸಿರುವ ‘ಹಾಥ್ ಕರ್ಘ ಉತ್ಸವ್–ವಿರಾಸತ್’ ಕೈಮಗ್ಗ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಅಭಿವೃದ್ಧಿ ಆಯುಕ್ತೆ ಹಾಗೂ ನಿರ್ದೇಶಕಿ ಕೆ. ಜ್ಯೋತಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟಸೂರಮಠ, ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಎ.ಎನ್. ಸಂತೋಷ್ ಕುಮಾರ್, ಬೆಂಗಳೂರಿನ ಕಾವೇರಿ ಹ್ಯಾಂಡ್ಲೂಮ್ಸ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸಮೂರ್ತಿ, ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷ ಬಿ.ಜೆ. ಗಣೇಶ್, ಕೇಂದ್ರ ಜವಳಿ ಮಂತ್ರಾಲಯದ ನೇಕಾರರ ಸೇವಾ ಕೇಂದ್ರ ಸಹಾಯಕ ನಿರ್ದೇಶಕ ಮಾರಿಮುತ್ತು, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ರಂಗಸ್ವಾಮಿ ಪಾಲ್ಗೊಂಡಿದ್ದರು.

ಕೇಂದ್ರ ಜವಳಿ ಸಚಿವಾಲಯ ಮತ್ತು ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಂಡಳಿ ಸಹಯೋಗದಲ್ಲಿ ಆಯೋಜಿಸಲಾಗಿದೆ. ನ.21ರವರೆಗೆ ಮೇಳ ನಡೆಯಲಿದ್ದು, ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ತೆರೆದಿರಲಿದೆ. ದೇಶದ 75 ನೇಕಾರರು ಭಾಗವಹಿಸುತ್ತಿದ್ದು, ರಾಜ್ಯದ 15 ಜಿಲ್ಲೆಗಳ ಕುಶಲಕರ್ಮಿಗಳು ಪಾಲ್ಗೊಳ್ಳುವರು. ಶೇ 20ರಷ್ಟು ರಿಯಾಯಿತಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.