ಮೈಸೂರು: ಇಲ್ಲಿನ ಮಣಿಪಾಲ್ ಆಸ್ಪತ್ರೆಯಿಂದ ‘ಹೃದ್ರೋಗ ತಡೆಗಟ್ಟುವಿಕೆ’ ಬಗ್ಗೆ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು.

ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಹೃದಯ ರಕ್ತನಾಳದ ಶಸ್ತ್ರಚಿಕಿತ್ಸಕ ಮತ್ತು ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ, ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿ ಸಲಹೆಗಾರರಾದ ಡಾ.ಕೇಶವಮೂರ್ತಿ ಸಿ.ಬಿ. ಹಾಗೂ ಡಾ.ಶರತ್ ಬಾಬು ಎನ್.ಎಂ. ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.

‘ಆರೋಗ್ಯಕರ ಅಭ್ಯಾಸಗಳು ಹಾಗೂ ಉತ್ತಮ ಜೀವನಶೈಲಿಯಿಂದ ಹೃದಯದ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ಸಲಹೆ ನೀಡಿದರು.

‘ತಂಬಾಕಿನಿಂದ ದೂರವಿರಬೇಕು. ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ನಿಯಮಿತ ವ್ಯದ್ಯಕೀಯ ತಪಾಸಣೆ ಮತ್ತು ಆರೋಗ್ಯಕರ ಆಹಾರದ ಮೂಲಕ ಮಧುಮೇಹ ನಿರ್ವಹಿಸಬೇಕು. ಒತ್ತಡ ನಿವಾರಣೆಗೆ ಯೋಗಾಭ್ಯಾಸ ಮಾಡಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.