ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಬಳಿ ಮೈಸೂರು ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕಪಿಲಾ ನದಿ ಸೇತುವೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರದಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

1968ರಲ್ಲಿ ನಿರ್ಮಾಣಗೊಂಡಿದ್ದ ಸೇತುವೆ ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಗೊಂಡಿತ್ತು. ಸೇತುವೆ ಹಳ್ಳ ಕೊಳ್ಳಗಳಿಂದ ಕೂಡಿದ್ದು, ಸೇತುವೆಗೆ ಬಳಸಿದ್ದ ಕಬ್ಬಿಣದ ಎದ್ದು ಕಾಣುತ್ತಿದ್ದವು. ವಾಹನ ಸವಾರರು ಸೇತುವೆ ಮೇಲೆ ಸಂಚರಿಸಲು ತೊಂದರೆ ಉಂಟಾಗಿತ್ತು. ಸಂಘ–ಸಂಸ್ಥೆಗಳು ಸೇತುವೆ ದುರಸ್ತಿ ಕಾರ್ಯ ನಡೆಸುವಂತೆ ಪ್ರತಿಭಟನೆ ನಡೆಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಮೂರು ತಿಂಗಳ ಕಾಲ ಸೇತುವೆ ಮೇಲೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಿದ್ದರು ಎಂದು ಆರ್‌ಟಿಐ ಕಾರ್ಯಕರ್ತ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.