ನಂಜನಗೂಡು: ಎರಡು ವರ್ಷದ ಗಂಡು ಮಗುವಿನೊಂದಿಗೆ ಕುಡಿಯುವ ನೀರಿನ ಟ್ಯಾಂಕ್ ಹತ್ತಿ ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ ತಾಲ್ಲೂಕಿನ ಕಸುವಿನಹಳ್ಳಿ ನಿವಾಸಿ ಕೃಷ್ಣಮೂರ್ತಿ (40) ಎಂಬವರನ್ನು ಪೊಲೀಸರು ಸುರಕ್ಷಿತವಾಗಿ ಕೆಳಕ್ಕೆ ಇಳಿಸಿದರು.

ಪತ್ನಿಯೊಂದಿಗೆ ನಡೆದ ಕಲಹದಿಂದ ಬೇಸತ್ತ ಅವರು ಟ್ಯಾಂಕ್ ಹತ್ತಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು. ಕೆಳಗೆ ಇಳಿಯುವಂತೆ ಗ್ರಾಮಸ್ಥರು ಕೋರಿದರೂ ಸ್ಪಂದಿಸಲಿಲ್ಲ. ಮಾಹಿತಿ ಪಡೆದ ಬಳಿಕ ಸ್ಥಳಕ್ಕೆ ಧಾವಿಸಿದ ತುರ್ತು ಸಹಾಯವಾಣಿ 112ರ ಸಿಬ್ಬಂದಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಅವರು ಮಗುವಿನೊಂದಿಗೆ ಸುರಕ್ಷಿತವಾಗಿ ಕೆಳಗೆ ಇಳಿದರು. ನಂತರ ಅವರನ್ನು ವಶಕ್ಕೆ ಪಡೆದ ನಂಜನಗೂಡು ಗ್ರಾಮಾಂತರ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.