ಹುಣಸೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಡಗೂರು ಎಚ್.ವಿಶ್ವನಾಥ್ ಅವರು ಪ್ರಚಾರದ ಸಂದರ್ಭದಲ್ಲಿ ಕಮಲದ ಹೂವು ಹಿಡಿದೇ ಮತಯಾಚನೆ ಮಾಡುತ್ತಿದ್ದಾರೆ. ಮತದಾರರಿಗೆ ತಮ್ಮ ಪಕ್ಷದ ಚಿಹ್ನೆಯನ್ನು ಮನದಟ್ಟು ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವಿಶ್ವನಾಥ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು. ತೆನೆ ಹೊತ್ತ ಮಹಿಳೆ ಕೈ ಹಿಡಿದು ಮತದಾರರ ಮನೆ ಬಾಗಿಲಿಗೆ ತೆರಳಿದ್ದರು. ಚುನಾವಣೆಯಲ್ಲಿ ಗೆಲುವೂ ಸಾಧಿಸಿದ್ದರು. ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತದಾರರಿಗೆ ಚಿಹ್ನೆ ಗೊಂದಲ ಆಗಬಹುದು ಎಂಬ ಕಾರಣದಿಂದ ಕಮಲದ ಚಿಹ್ನೆಯನ್ನು ಮತದಾರರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನ ಪಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.