ಮೈಸೂರು: ‘ಕೌಶಲ ತರಬೇತಿ, ಉದ್ಯೋಗ ಮಾಹಿತಿ ಹಾಗೂ ನೇಮಕಾತಿ ಮೇಳವನ್ನು ಫೆ.21ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಲಾಗಿದೆ’ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.

‘ಜಿಲ್ಲಾಡಳಿತ, ಕೌಶಲ ಅಭಿವೃದ್ಧಿ, ಉದ್ಯಮಿಶೀಲತೆ, ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಆಯೋಜಿಸಲಾಗಿದೆ. ಯುವಜನರಿಗೆ ನೆರವಾಗುವುದು ಮೇಳದ ಉದ್ದೇಶವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ ಸಿಂಹ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪಾ ಯೋಗೇಶ್ ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮೇಳದಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 18 ವರ್ಷ ಮೇಲಿನ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ಅವಕಾಶ ಪಡೆದುಕೊಳ್ಳಬಹುದು. ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಬಿಇ, ಎಂಬಿಎ, ಎಂ.ಟೆಕ್ ಹೀಗೆ... ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಭಾಗವಹಿಸಬಹುದು. ಅಂಗವಿಕಲರಿಗೂ ಅವಕಾಶವಿದೆ. ಕಂಪನಿಗಳು ತಮಗೆ ಬೇಕಾದ ಹುದ್ದೆಗಳಿಗೆ ಸಂದರ್ಶನ ನಡೆಸಲಿವೆ’ ಎಂದು ತಿಳಿಸಿದ್ದಾರೆ.

‘ಬಹಳಷ್ಟು ಪದವೀಧರರಲ್ಲಿ ಉದ್ಯೋಗ ಕ್ಷೇತ್ರಕ್ಕೆ ಬೇಕಾದ ಕೌಶಲವಿರುವುದಿಲ್ಲ. ಇದರಿಂದ ಅವರು ಉದ್ಯೋಗ ಪಡೆದುಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಈ ಕೊರತೆ ನೀಗಿಸುವುದಕ್ಕಾಗಿ ಅಂದು ಕೌಶಲ ತರಬೇತಿಯ ಮಹತ್ವದ ಬಗ್ಗೆಯೂ ಮಾಹಿತಿ ನೀಡಲಾಗುವುದು. ಸರ್ಕಾರದ ಯೋಜನೆಗಳ ಬಗ್ಗೆಯೂ ತಿಳಿಸಲಾಗುವುದು. ಉದ್ಯೋಗಗಳ ಅವಕಾಶಗಳನ್ನು ಸೃಷ್ಟಿಸುವ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಲಾಗುವುದು. ಯುವಜನರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0821–2970815/ 2489972 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.