ಮೈಸೂರು: ಸಾಹಿತಿ ಮಳಲಿ ವಸಂತಕುಮಾರ್ (76) ಅವರು, ಬೆಂಗಳೂರಿನ ತಮ್ಮ ಪುತ್ರ ರನ್ನ ಮಳಲಿ ಅವರ ನಿವಾಸದಲ್ಲಿ ಗುರುವಾರ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ ಶಾಂತಾ, ಪುತ್ರಿ ಎಂ.ವಿ.ರೂಪಾ, ಪುತ್ರ ರನ್ನ ಇದ್ದಾರೆ. ಇವರ ಮತ್ತೊಬ್ಬ ಪುತ್ರಿ ವಸು ಮಳಲಿ ಈ ಹಿಂದೆ ನಿಧನರಾಗಿದ್ದಾರೆ.

ಹಾಸನ ಜಿಲ್ಲೆಯ ಮಳಲಿ ಗ್ರಾಮದವರಾದ ವಸಂತಕುಮಾರ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಬದುಕು ಆರಂಭಿಸಿದ ಇವರು, ಹಾಸನ ಮತ್ತು ಮಂಡ್ಯದ ಸ್ನಾತಕೋತ್ತರ ಕೇಂದ್ರಗಳ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಗೋಕಾಕ ಚಳವಳಿಯಲ್ಲೂ ಭಾಗಿಯಾಗಿದ್ದರು.

ಕಾವ್ಯ, ಕಥೆ, ನಾಟಕ, ವಿಮರ್ಶೆ, ಸಂಶೋಧನೆ, ಜಾನಪದ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಅವರು, ಮಳಲಿ ಗಿಡ್ಡಮ್ಮ, ಹೃದಯಗಂಗೆ, ಯಮಧರ್ಮ, ಲಂಕೇಶ್ವರ, ಸ್ಥಿತ್ಯಂತರ, ರಿಕ್ತ, ಹರ್ಷ, ವಿವಕ್ಷೆ ಸೇರಿದಂತೆ 40ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಮೈಸೂರಿನ ಹೊರವಲಯದಲ್ಲಿರುವ ಅವರ ತೋಟದಲ್ಲಿ ಶುಕ್ರವಾರ (ಮಾರ್ಚ್ 19) ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮೈಸೂರಿನ ಪುರಭವನದಲ್ಲಿ ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.