ಮೈಸೂರು: ಕೃಷ್ಣರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ವಿ.ಮಲ್ಲೇಶ್ ₹ 1.15 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ.

ನಾಮಪತ್ರದೊಂದಿಗೆ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಿರುವ ಅವರು, ಸ್ಥಿರಾಸ್ತಿಯೂ ಇಲ್ಲ. ಯಾವುದೇ ಸಾಲವೂ ಇಲ್ಲ ಎಂದು ತಿಳಿಸಿದ್ದಾರೆ.

57 ವರ್ಷ ವಯಸ್ಸಿನ ಅವರು ದ್ವಿತೀಯ ಪಿಯುಸಿ (ಅಪೂರ್ಣ) ವಿದ್ಯಾರ್ಹತೆಯವರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿದ್ದಾರೆ. ಕೈಯಲ್ಲಿ ₹ 39ಸಾವಿರ ನಗದು ಇಟ್ಟಿದ್ದಾರೆ. ಒಂದು ದ್ವಿಚಕ್ರವಾಹನವಿದೆ. ಯಾವುದೇ ಚಿನ್ನಾಭರಣ ಇಲ್ಲ. ಕ್ಲೇಮುಗಳಿಲ್ಲ. ಕೃಷಿ ಭೂಮಿ, ಕೃಷಿಯೇತರ ಭೂಮಿ, ವಾಣಿಜ್ಯ ಕಟ್ಟಡ ಇಲ್ಲ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ. ಸಮಾಜಸೇವೆಯಲ್ಲಿ ತೊಡಗಿದ್ದೇನೆ. ಆದಾಯದ ಮೂಲಗಳಿಲ್ಲ. ಯಾವುದೇ ಕ್ರಮಿನಲ್ ಪ್ರಕರಣಗಳಿಲ್ಲ ಎಂದು ಪ್ರಮಾಣಪತ್ರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.