ಮೈಸೂರು: ‘ನಗರದ ಜಯಲಕ್ಷ್ಮೀಪುರಂನಲ್ಲಿನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಏ.6, 7ರಂದು ಟಾಟಾ ಐಪಿಎಲ್ ಫ್ಯಾನ್ ಪಾರ್ಕ್ ಐಪಿಎಲ್ ಪಂದ್ಯಾವಳಿಯನ್ನು ಬೃಹತ್ ಎಲ್ಇಡಿ ಪರದೆಯಲ್ಲಿ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ’ ಎಂದು ರಾಜ್ಯ ಕ್ರಿಕೆಟ್ ಮಂಡಳಿ ಮೈಸೂರು ವಲಯ ಸಂಚಾಲಕ ಹರಿಕೃಷ್ಣಕುಮಾರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲರಿಗೂ ಉಚಿತ ಪ್ರವೇಶವಿದೆ. ಈ ಫ್ಯಾನ್ ಪಾರ್ಕ್ ವ್ಯವಸ್ಥೆಯಲ್ಲಿ ಅಂಗವಿಕಲರು, ಹಿರಿಯ ನಾಗರಿಕರಿಗೆ ಸೂಕ್ತ ಸೌಲಭ್ಯಗಳಿವೆ. ಮಕ್ಕಳು, ದೊಡ್ಡವರಿಗೆ ಮನರಂಜನಾ ಆಟ, ತಿಂಡಿ ತಿನಿಸುಗಳ ಮಳಿಗೆ ಇರಲಿವೆ. ಬಿಸಿಸಿಐ ಈ ರೀತಿ ದೇಶದ ವಿವಿಧೆಡೆ ಆಗಾಗ್ಗೆ ಫ್ಯಾನ್ ಪಾರ್ಕ್ ಆಯೋಜಿಸುತ್ತಿದ್ದು, ಕ್ರಿಕೆಟ್ ಪ್ರಿಯರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

‘ಏ.6ರಂದು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಪಂದ್ಯ ನಡೆಯಲಿದೆ. ಇದಕ್ಕಾಗಿ ದ್ವಾರವನ್ನು ಸಂಜೆ 5.30ಕ್ಕೆ ತೆರೆಯಲಾಗುವುದು. ಏ.7ರಂದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಾಗೂ ಲಕ್ನೊ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಪಂದ್ಯಗಳು ನಡೆಯಲಿವೆ. ಇದಕ್ಕಾಗಿ ದ್ವಾರವನ್ನು ಮಧ್ಯಾಹ್ನ 1.30ಕ್ಕೆ ತೆರೆಯಲಾಗುವುದು’ ಎಂದು ತಿಳಿಸಿದರು.

ಬಿಸಿಸಿಐ ಪ್ರತಿನಿಧಿ ಸತ್ಯಪಾಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.