ಹುಣಸೂರು: ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸ್ ವಶಪಡಿಸಿಕೊಂಡು 15 ಜಾನುವಾರು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ.

ಬಿಳಿಕೆರೆ ಹೋಬಳಿ ಕೇಂದ್ರದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾನುವಾರ ರಾತ್ರಿ ಕರ್ತವ್ಯದಲ್ಲಿದ್ದ ಸರ್ಕಲ್ ಇನ್‌ಸ್ಪೆಕ್ಟರ್ ಚಿಕ್ಕಸ್ವಾಮಿ ಮತ್ತು ಸಿಬ್ಬಂದಿ ಹುಣಸೂರು ಕಡೆಯಿಂದ ಬಂದ ಗೂಡ್ಸ್ ವಾಹನ ತಪಾಸಣೆ ಮಾಡಿದಾಗ 15 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಗೊತ್ತಾಗಿದೆ.

ಆರೋಪಿಗಳಾದ ಪಿರಿಯಾಪಟ್ಟಣ ತಾಲ್ಲೂಕು ಹಲಗನಹಳ್ಳಿ ನಿವಾಸಿ ಅಲೀಮ್, ಮನ್ಸೂರ್ ಎಂಬುವವರನ್ನು ಬಂಧಿಸಲಾಗಿದೆ. ಜಾನುವಾರುಗಳನ್ನು ಮೈಸೂರಿನ ಪಿಂಜರಾಪೋಲ್‌ಗೆ ಕಳುಹಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.