ನಂಜನಗೂಡು: ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಾನುವಾರ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.

ಶ್ರೀಕಂಠೇಶ್ವರ, ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಮ್ಮ, ನಾರಾಯಣಸ್ವಾಮಿ ಗುಡಿಗಳಿಗೆ ತೆರಳಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿ ವರ್ಷವೂ ಚಾಮುಂಡೇಶ್ವರಿ ಹಾಗೂ ಶ್ರೀಕಂಠೇಶ್ವರ ದೇವಾಲಯಗಳಿಗೆ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸುವುದು ನಮ್ಮ ಕುಟುಂಬದ ವಾಡಿಕೆಯಾಗಿದೆ. ಅದರಂತೆ ಮನೆದೇವರಾದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದೇನೆ’ ಎಂದು ಹೇಳಿದರು.

ಸಚಿವ ಭೈರತಿ ಸುರೇಶ್ ಅವರಿಗೆ ದೇವಾಲಯದ ಆಗಮಿಕರು ದೇವರ ಶೇಷ ವಸ್ತ್ರ, ಪ್ರಸಾದ ನೀಡಿದರು.

ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭೆ ಆಯುಕ್ತ ನಂಜುಂಡಸ್ವಾಮಿ, ದೇವಾಲಯದ ಇಒ ಜಗದೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.