ಕೆ.ಆರ್.ನಗರ: ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರು ಮನೆ ನಿರ್ಮಿಸಿಕೊಳ್ಳಲು ನಿವೇಶನದ ಜತೆಗೆ ₹7 ಲಕ್ಷವನ್ನು ಒಂದೇ ಬಾರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಇಲ್ಲಿ ಶುಕ್ರವಾರ ಹೇಳಿದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯ ಸರ್ಕಾರದಿಂದ ₹6 ಲಕ್ಷ, ಕೇಂದ್ರೀಯ ವಿಪತ್ತು ನಿಧಿಯ ಪರಿಹಾರ ಸೇರಿದಂತೆ ಒಟ್ಟು ₹7 ಲಕ್ಷ ನೀಡಲಾಗುವುದು. ಹಾನಿಗೊಂಡ ಮನೆಗೆ ₹1 ಲಕ್ಷ , ಅಗತ್ಯ ವಸ್ತುಗಳನ್ನು ಕೊಳ್ಳಲು ₹50 ಸಾವಿರ, ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಮನೆಯಲ್ಲಿ ವಾಸಿಸಲು ತಿಂಗಳಿಗೆ ₹10 ಸಾವಿರ ಕೊಡಲು ನಿರ್ಧರಿಸಲಾಗಿದೆ ಎಂದರು.

ಕೆ.ಆರ್.ನಗರದ ಹಳೇ ಯಡತೊರೆಯಲ್ಲಿ ರೈಲ್ವೆ ಭದ್ರತಾ ಪಡೆ (ಆರ್‌ಪಿಎಫ್) ತರಬೇತಿ ಕೇಂದ್ರ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು, ಈಗಾಗಲೇ ಒಂದು ಹಂತದ ಅನುಮತಿ ದೊರೆತಿದೆ. ಅದಕ್ಕೆ ₹500ರಿಂದ ₹600 ಕೋಟಿವರೆಗೆ ಅನುದಾನ ಸಿಗಲಿದ್ದು, ರಾಜ್ಯದ ಮೊದಲ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.