ಹುಣಸೂರು: ಜಾತಿ, ಧರ್ಮ ಭೇದವಿಲ್ಲದೆ ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸುವ ಮೂಲಕ ಸದ್ಗತಿ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ ಹುಣಸೂರಿನ ಶಬ್ಬೀರ್ ನಗರದ ನಿವಾಸಿ ಮೊಹಮ್ಮದ್ ಅಜರ್.

ಮೊಹಮ್ಮದ್ ರಫಿಕ್ ಅವರ ಮಗನಾದ 24 ವರ್ಷದ ಮೊಹಮ್ಮದ್ ಅಜರ್ ‘ಸ್ನೇಹಜೀವಿ’ ಆಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ.

ಈ ಹಿಂದೆ ತಂದೆ ಮೊಹಮ್ಮದ್ ರಫಿಕ್ ಅವರೊಂದಿಗೆ ಲಾರಿ ಚಾಲಕನಾಗಿ ಕೆಲಸಕ್ಕೆ ಸೇರಿದ ಅಜರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ನೋಡಿ ಬೇಸರಗೊಂಡು ಲಾರಿ ಚಾಲಕ ವೃತ್ತಿಗೆ ವಿದಾಯ ಹೇಳಿ ಜನ ಸೇವೆಯಲ್ಲಿ ತೊಡಗಿಸಿಕೊಂಡರು. ಕೋವಿಡ್ ಸಮಯದಲ್ಲಿ ಬೆಂಗಳೂರಿನಲ್ಲಿ ಆಂಬುಲೆನ್ಸ್ ಚಾಲಕರಾಗಿದ್ದ ಅಜರ್, ಕೊರೊನಾ ಸೋಂಕಿಗೆ ಬಲಿಯಾದ ನೂರಕ್ಕೂ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ್ದರು.

ನಗರ ಹಾಗೂ ತಾಲ್ಲೂಕಿನಲ್ಲಿ ಪತ್ತೆಯಾಗುವ ಅನಾಥ ಹಾಗೂ ಅಪರಿಚಿತ ಶವಗಳನ್ನು ಆಂಬುಲೆನ್ಸ್ನಲ್ಲಿ ಶವಾಗಾರಕ್ಕೆ ತಂದು, ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸುತ್ತಾರೆ. ಕಳೆದ ನಾಲ್ಕು ತಿಂಗಳಲ್ಲಿ ಎರಡು ಅನಾಥ ಶವಗಳಿಗೆ ನಗರದ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶುಕ್ರವಾರ ಭಿಕ್ಷುಕನ ಶವ ಪತ್ತೆಯಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಶನಿವಾರ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ.

‘ಆಂಬುಲೆನ್ಸ್ ಸೇವೆಗೆ ದಿನದ 24 ಗಂಟೆಗೂ ಸಿದ್ಧ. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ನಿವಾಸಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಗ್ರೀನ್ ಕಾರಿಡಾರ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದ್ದೇನೆ’ ಎಂದು ಅಜರ್ ತಿಳಿಸಿದರು.

‘ಸಂಚಾರ ನಿಯಮಗಳ ಪಾಲನೆಯಿಂದ ಅಪಘಾತಗಳನ್ನು ತಡೆಯಬಹುದು. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಯುವಕರ ಪ್ರಮಾಣವೇ ಹೆಚ್ಚಾಗಿದೆ. ಹೀಗಾಗಿ, ಸುರಕ್ಷಿತ ಪ್ರಯಾಣಕ್ಕೆ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

ಮೊಹಮ್ಮದ್ ಅಜರ್ ಮೊ.ಸಂ. 9535927543.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.