ಮೈಸೂರು: ‘ಮುಡಾದಲ್ಲಿ ಅಕ್ರಮವಾಗಿ ನಿವೇಶನಗಳ ಹಂಚಿಕೆ ಕುರಿತು ದಾಖಲೆ ಸಂಗ್ರಹಿಸಿದ್ದ ಲೋಕಾಯುಕ್ತ, ಮುಡಾ ಕಚೇರಿ ಮೇಲೆ ದಾಳಿಗೆ ಜೂನ್ನಲ್ಲಿ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಅಧಿಕಾರಿಗಳಿಂದಲೇ ಮಾಹಿತಿ ಸೋರಿಕೆಯಾಗಿದ್ದರಿಂದ ದಾಳಿ ಕೈಬಿಟ್ಟಿತ್ತು’ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಲೋಕಾಯುಕ್ತ ಸರ್ಚ್ ವಾರಂಟ್ ಆದೇಶವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಕೃಷ್ಣ, ‘ಜೂನ್ 28ರಂದು ಮೈಸೂರು ಲೋಕಾಯುಕ್ತ ಡಿವೈಎಸ್ಪಿ ಮಾಲತೇಶ್ ಹೆಸರಿನಲ್ಲಿ ಹೊರಡಿಸಿದ್ದ ವಾರಂಟ್, 29ರಂದು ಮೈಸೂರು ಎಸ್.ಪಿ.ಗೆ ತಲುಪಿತ್ತು. ನಂತರ ಮಾಹಿತಿ ಸೋರಿಕೆಯಾಗಿ, ಜುಲೈ 1ರಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ದಿಢೀರನೆ ಎಂದು ಬಂದು ಮುಡಾ ಕಚೇರಿಯಲ್ಲಿದ್ದ ದಾಖಲೆಗಳನ್ನು ಹೊತ್ತೊಯ್ದಿದ್ದರು’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.