ಮೈಸೂರು: ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದ ಪ್ರಕರಣದಲ್ಲಿ ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿನ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ.

‘ಅಂದು ಬೆಳಿಗ್ಗೆ ಮೈಸೂರಿನ ಕಚೇರಿಯಲ್ಲಿ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಲಾಗಿದೆ’ ಎಂದು ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದಾರೆ. ಉಳಿದ ಮೂವರು ಆರೋಪಿಗಳಾದ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ಅವರ ವಿಚಾರಣೆಯು ಈಗಾಗಲೇ ಮುಗಿದಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸೂಚನೆಯಂತೆ ಲೋಕಾಯುಕ್ತ ಪೊಲೀಸರು ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಡಿಸೆಂಬರ್ ಅಂತ್ಯಕ್ಕೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಬೇಕಿದೆ.
.MUDA Scam | 3 ಬ್ಯಾಗ್ನಲ್ಲಿ ದಾಖಲೆ ಹೊತ್ತೊಯ್ದ ಇ.ಡಿ, ಸಿಎಂಗೆ ನೋಟಿಸ್ ಸಾಧ್ಯತೆ.MUDA Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.